ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ ನಲ್ಲಿಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಚೆನ್ನೈ ಬೌಲಿಂಗ್ ಆಯ್ದುಕೊಂಡರು.
ಟೂರ್ನಿ ಆರಂಭಕ್ಕೂ ಮುನ್ನ ಬಲಿಷ್ಠ ತಂಡ ಎನಿಸಿಕೊಂಡ ಚೆನ್ನೈ ಸೂಪರ್‌ಕಿಂಗ್ಸ್, ಈ ಬಾರಿಯ ಐಪಿಎಲ್ ಸಮಿಫೈನಲ್ ರೇಸ್‌ನಿಂದ ಈಗಾಗಲೇ ಹೊರಬಿದ್ದಿದೆ. ಅವರು ಆಡಿರುವ 10 ಪಂದ್ಯಗಳಲ್ಲಿ 8 ಸೋಲು ಕೇವಲ 2 ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಇನ್ನೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಡಿರುವ 10 ಪಂದ್ಯಗಳಲ್ಲಿ 7 ಗೆಲುವು ಹಾಗೂ 3 ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ.
ಚೆನ್ನೈ ಸೂಪರ್ ಕಿಂಗ್ಸ್: ಶೇಖ್ ರಶೀದ್, ಆಯುಷ್ ಮ್ಹಾತ್ರೆ, ಸ್ಯಾಮ್ ಕರನ್, ರವೀಂದ್ರ ಜಡೇಜಾ, ಡೆವಾಲ್ಡ್ ಬ್ರೆವಿಸ್, ದೀಪಕ್ ಹೂಡಾ, ಎಂಎಸ್ ಧೋನಿ (ನಾಯಕ), ನೂರ್ ಅಹ್ಮದ್, ಖಲೀಲ್ ಅಹ್ಮದ್, ಅನ್ಶುಲ್ ಕಾಂಬೋಜ್, ಮತಿಶಾ ಪತಿರಾನ.
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಜೇಕಬ್ ಬೆಥೆಲ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ರೊಮಾರಿಯೊ ಶೆಫರ್ಡ್, ಭುವನೇಶ್ವರ್ ಕುಮಾರ್, ಲುಂಗಿ ಎನ್‌ಗಿಡಿ, ಯಶ್ ದಯಾಳ್.