ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾದಕವಸ್ತು ಕಳ್ಳಸಾಗಣೆ ವಿರುದ್ಧದ ಕಾರ್ಯಾಚರಣೆಯ ಭಾಗವಾಗಿ ಬೆಂಗಳೂರು ಕಸ್ಟಮ್ಸ್ ಕಮಿಷನರೇಟ್ ಸುಮಾರು 36 ಕೋಟಿ ರೂ. ಮೌಲ್ಯದ ಡ್ರಗ್ಸ್ ಅನ್ನು ನಾಶಪಡಿಸಿದೆ.
ಕೊಕೇನ್ ಮತ್ತು ಗಾಂಜಾ ಸೇರಿದಂತೆ ಒಟ್ಟು 11.997 ಕಿಲೋದಷ್ಟು ಡ್ರಗ್ಸ್ ಅನ್ನು ಜನವರಿ 24 ರಂದು ದಹಿಸಲಾಗಿತ್ತು ಎಂದು ತಿಳಿಸಿದ್ದಾರೆ.
ಮಾದಕವಸ್ತು ಕಳ್ಳಸಾಗಣೆ ಮತ್ತು ಅಕ್ರಮ ವಿತರಣೆಯನ್ನು ತಡೆಗಟ್ಟಲು ನೇರ ತೆರಿಗೆ ಸಮಿತಿ ಪ್ರಾರಂಭಿಸಿದ ಮಾದಕ ದ್ರವ್ಯ ವಿಲೇವಾರಿ ಅಭಿಯಾನದ ಭಾಗವಾಗಿ ಈ ಕಾರ್ಯಾಚರಣೆಯನ್ನು ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಾದಕವಸ್ತು ಕಳ್ಳಸಾಗಣೆಯನ್ನು ತಡೆಗಟ್ಟಲು ಮತ್ತು ಮಾದಕ ವ್ಯಸನವನ್ನು ತಡೆಯುವ ಪ್ರಮುಖ ಕಾರ್ಯಾಚರಣೆಯನ್ನು ಕಸ್ಟಮ್ಸ್ ಕಮಿಷನರ್ ಹೇಳಿದ್ದಾರೆ.
ಕಾರ್ಯಾಚರಣೆಯಲ್ಲಿ ಭಾಗಿಯಾಗಿರುವ ಎಲ್ಲ ಅಧಿಕಾರಿಗಳನ್ನು ಶ್ಲಾಘಿಸಿದ್ದಾರೆ. ಹೆಚ್ಚಿನ ಜಾಗರೂಕತೆಯೊಂದಿಗೆ ಡ್ರಗ್ಸ್ ವಿರುದ್ಧದ ಹೋರಾಟವನ್ನು ಮುಂದುವರೆಸುವುದು ಮುಖ್ಯ ಎಂದು ಅವರು ಹೇಳಿದ್ದಾರೆ.