ಹೊಸದಿಗಂತ ಡಿಜಿಟಲ್ ಡೆಸ್ಕ್ :
ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿಗಮದಲ್ಲಿ 96 ಬ್ರಾಂಚ್ ವ್ಯವಸ್ಥಾಪಕ, ಹಿರಿಯ ವ್ಯವಸ್ಥಾಪಕ, ಶೀಘ್ರಲಿಪಿಗಾರ, ಕಿರಿಯ ಸಹಾಯಕ, ಕಂಪ್ಯೂಟರ್ ಆಪರೇಟರ್, ಡ್ರೈವರ್ ಮತ್ತು ಗ್ರೂಪ್ ಡಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಈ ಹುದ್ದೆಗಳಿಗೆ 10ನೇ ತರಗತಿ, 12ನೇ ತರಗತಿ ಮತ್ತು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಫೆಬ್ರವರಿ 28,2023ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ ತಿಂಗಳಿಗೆ 23,500/- ರಿಂದ 47,650/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಬ್ರಾಂಚ್ ವ್ಯವಸ್ಥಾಪಕ, ಹಿರಿಯ ವ್ಯವಸ್ಥಾಪಕ, ಶೀಘ್ರಲಿಪಿಗಾರ, ಕಿರಿಯ ಸಹಾಯಕ, ಕಂಪ್ಯೂಟರ್ ಆಪರೇಟರ್, ಡ್ರೈವರ್ ಮತ್ತು ಗ್ರೂಪ್ ಡಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿದಾರರು 1,500/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 750/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಫೆಬ್ರವರಿ 28,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.