ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಮೈಸೂರು ರಸ್ತೆಯ ಬ್ಯಾಟರಾಯನಪುರದಲ್ಲಿರುವ ಐತಿಹಾಸಕ ಗಾಳಿ ಆಂಜನೇಯ ಸ್ವಾಮಿ ದೇಗುಲವನ್ನು ಮುಜರಾಯಿ ಇಲಾಖೆ ತನ್ನ ವಶಕ್ಕೆ ಪಡೆದುಕೊಂಡು ಆದೇಶ ಹೊರಡಿಸಿದೆ.
ಕಳೆದ ವರ್ಷ ದೇವಸ್ಥಾನದ ಹುಂಡಿ ಹಣ ಎಣಿಸುವಾಗಲೇ ಆಡಳಿತ ಮಂಡಳಿಯ ಸದಸ್ಯರು ಹಣ ಎಗರಿಸಿದ್ದರು. ಹಣ ಎಗರಿಸುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ಘಟನೆಯ ಬಗ್ಗೆ ವರದಿ ನೀಡುವಂತೆ ರಾಜ್ಯ ಸರ್ಕಾರ ಮುಜರಾಯಿ ಇಲಾಖೆಗೆ ಸೂಚನೆ ನೀಡಿತ್ತು.
ಇದೀಗ ಮುಜರಾಯಿ ಇಲಾಖೆ ರಾಜ್ಯ ಸರ್ಕಾರಕ್ಕೆ ವರದಿ ನೀಡಿದೆ. ವರದಿಯಲ್ಲಿ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನವನ್ನು ಮುಜರಾಯಿ ಇಲಾಖೆಗೆ ವರ್ಗಾವಣೆಗೆ ಶಿಫಾರಸ್ಸು ಮಾಡಲಾಗಿತ್ತು. ಇದನ್ನು ಒಪ್ಪಿದ ಸರ್ಕಾರ 1997ರ 42 ಮತ್ತು 43ರನ್ವಯ ಘೋಷಿತ ಸಂಸ್ಥೆ ಅಂತ ಘೋಷಣೆ ಮಾಡಿದೆ.