ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 8 ವಲಯಗಳಲ್ಲಿ ಸುಮಾರು 200 ಅನಧಿಕೃತ ಕಟ್ಟಡಗಳು ಪತ್ತೆಯಾಗಿವೆ.
ಸಮೀಕ್ಷೆ ಪೂರ್ಣಗೊಂಡ ಬಳಿಕ ತೆರವು ಕಾರ್ಯಾಚರಣೆ ಆರಂಭಿಸಲಾಗುವುದು ಎಂದು ಬಿಬಿಎಂಪಿ ಮಾಹಿತಿ ನೀಡಿದೆ. ಈ ಬಗ್ಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾಹಿತಿ ನೀಡಿದ್ದು, ನಗರದಲ್ಲಿ ಕಟ್ಟಡಗಳ ಅನಧಿಕೃತ ನಿರ್ಮಾಣದ ಸರ್ವೇ ಕಾರ್ಯ ಮುಂದುವರಿಸಲಾಗಿದ್ದು, ಈವರೆಗೆ 200ಕ್ಕೂ ಹೆಚ್ಚಿನ ಕಟ್ಟಡಗಳು ಅನುಮತಿ ಪಡೆಯದೇ ಹೆಚ್ಚುವರಿ ನಿರ್ಮಾಣ ಮಾಡಿರುವುದನ್ನು ಪತ್ತೆ ಮಾಡಲಾಗಿದೆ.
ಈವರೆಗೆ ಮಹದೇವಪುರ ವಲಯದಲ್ಲಿ 65 ಹಾಗೂ ಪಶ್ಚಿಮ ವಲಯದಲ್ಲಿ 27 ಹೆಚ್ಟಿನ ಅನಧಿಕೃತ ಕಟ್ಟಡಗಳು ಪತ್ತೆಯಾಗಿವೆ. ನಿಖರವಾದ ಅಂಕಿಅಂಶಗಳನ್ನು ಸಂಬಂಧಪಟ್ಟ ವಲಯ ಅಧಿಕಾರಿಗಳು ಶೀಘ್ರದಲ್ಲೇ ನೀಡಲಿದ್ದು, ಸಮೀಕ್ಷೆ ಮುಂದುವರಿಯುವುದರಿಂದ ಈ ಸಂಖ್ಯೆಯೂ ಮತ್ತಷ್ಟು ಹೆಚ್ಚಾಗಬಹುದು ಎಂದು ಹೇಳಿದರು.
ಸರ್ವೇ ಕಾರ್ಯ ಮತ್ತಷ್ಟು ಪರಿಣಾಮಕಾರಿಯಾಗಿ ಮಾಡಲು ಖಾಸಗಿ ಸಂಸ್ಥೆಯಿಂದ 70 ಮಂದಿಯನ್ನು ಗುತ್ತಿಗೆ ಆಧಾರದಲ್ಲಿ ನೇಮಿಸಲಾಗುತ್ತಿದೆ. ಜೊತೆದೆ ಮೊಬೈಲ್ ಆ್ಯಪ್ ಕೂಡ ಸಿದ್ಧಪಡಿಸಲಾಗುತ್ತಿದೆ ಎಂದು ತಿಳಿಸಿದರು.