ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, May 9, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಬೆಂಗಳೂರು ಬೆಡ್ ದಂಧೆ ಪ್ರಕರಣ: ಭ್ರಷ್ಟರ ಪತ್ತೆಗಾಗಿ ಅಖಾಡಕ್ಕಿಳಿಯಲಿದೆ ಸಿಸಿಬಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಬೆಂಗಳೂರಿನಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ನಡುವೆ ಆಸ್ಪತ್ರೆಗಳಲ್ಲಿ ಬೆಡ್ ಕಾಯ್ದೆರಿಸುವ ನೆಪದಲ್ಲಿ ಅಕ್ರಮ ನಡೆಸಿರುವುದು ಬೆಳಕಿಗೆ ಬಂದಿದ್ದು, ಈ ಪ್ರಕರಣವನ್ನು ಸಿಸಿಬಿ ಗೆ ವಹಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ವಕ್ತಾರ ಕಮಲ್ ಪಂತ್ ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಅವರು, ಬಿಬಿಎಂಪಿ ಪೋರ್ಟಲ್ ಮೂಲಕ ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಆಸ್ಪತ್ರೆಯಲ್ಲಿ ಬೆಡ್ ಕಾಯ್ದಿರಿಸುವ ವಿಧಾನದಲ್ಲಿ ಅಕ್ರಮ ಎಸಗಿದವರ ವಿರುದ್ಧ ಜಯನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಲಾಗಿದೆ. ಈ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದ್ದು, ಅಕ್ರಮದಲ್ಲಿ ಭಾಗಿಯಾದವರ ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಕೇಂದ್ರ ಅಪರಾಧ ಶಾಖೆ (ಸಿಸಿಬಿ) ಗೆ ವರ್ಗಾಯಿಸಲಾಗಿದೆ ಎಂದು ತಿಳಿಸಿದ್ದಾರೆ.
ಜಯನಗರದಲ್ಲಿ ದಾಖಲಾಗಿರುವ ಪ್ರಕರಣದ ಸಂಖ್ಯೆ(87/21 )ಯನ್ನು ನೀಡಿದ್ದು, ವಂಚನೆ, ಮೋಸ ಎಸಗಿದವರ ವಿರುದ್ಧ ಕಾನೂನು ಪ್ರಕಾರ ಕ್ರಮ ಜರುಗಿಸಲಾಗುತ್ತಿದೆ. ಈ ಬಗ್ಗೆ ಸಮಗ್ರ ತನಿಖೆಯನ್ನು ಸಿಸಿಬಿ ತಂಡ ನಡೆಸಲಿದೆ ಎಂದಿದ್ದಾರೆ.
ಬೆಂಗಳೂರು ಕೊರೋನಾ ವಾರ್ ರೂಂ ನ ಬಿಬಿಎಂಪಿ ಅಧಿಕಾರಿಗಳು ಬೆಡ್ ಗಳನ್ನು ಅಕ್ರಮವಾಗಿ ಬ್ಲಾಕ್ ಮಾಡಿ ಹಣ ಮಾಡಿಕೊಳ್ಳುತ್ತಿರುವುದರ ಬಗ್ಗೆ ಮಂಗಳವಾರ ಸಂಸದ ತೇಜಸ್ವಿ ಸೂರ್ಯ ಬಯಲಿಗೆಳೆದಿದ್ದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss