ಮಾರ್ಚ್ 23ರಿಂದ ‘ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಾರ್ಚ್ 23ರಿಂದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಆರಂಭವಾಗಲಿದೆ.
14ನೇ ಆವೃತ್ತಿಯ ಚಲನಚಿತ್ರೋತ್ಸವ ಇದಾಗಿದ್ದು ಮಾರ್ಚ್ 23ರಿಂದ 30ರವರೆಗೆ ನಡೆಯಲಿದೆ. ಈ ಬಾರಿ ಉತ್ಸವದಲ್ಲಿ 300ಕ್ಕೂ ಹೆಚ್ಚು ಚಲನಚಿತ್ರಗಳ ಪ್ರದರ್ಶನ ನಡೆಯಲಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಲೋಗೋ ಅನಾವರಣ ಮಾಡಿದ್ದಾರೆ. ಕಂದಾಯ ಸಚಿವ ಬಿಐಎಫ್‌ಎಫ್‌ನ ಸಂಘಟನಾ ಸಮಿತಿಯ ಅಧ್ಯಕ್ಷ ಆರ್. ಅಶೋಕ್ ಅವರು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಅಶೋಕ್ ಕಶ್ಯಪ್ ಅವರೊಂದಿಗೆ ಚಲನಚಿತ್ರೋತ್ಸವದ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!