ಉದ್ಘಾಟನೆ ಬೆನ್ನಲ್ಲೇ ಬೆಂಗಳೂರು- ಮೈಸೂರು ದಶಪಥ ಎಕ್ಸ್‌ಪ್ರೆಸ್‌ವೇ ಸಂಚಾರಕ್ಕೆ ಮುಕ್ತ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬೆಂಗಳೂರು- ಮೈಸೂರು ದಶಪಥ ಎಕ್ಸ್‌ಪ್ರೆಸ್‌ವೇಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ ದ ಬೆನ್ನಲ್ಲೇ ದಶಪಥ ಹೆದ್ದಾರಿಯಲ್ಲಿ ಸಂಚಾರಕ್ಕೆ ಅವಕಾಶ ನೀಡಲಾಗಿದೆ.

ಮೋದಿ ಆಗಮನದ ಹಿನ್ನಲೆಯಲ್ಲಿ ಇಂದು(ಮಾ.12) ಬೆಳಗ್ಗೆ 7 ಗಂಟೆಯಿಂದ ಸಂಜೆ 6 ವರೆಗೆ ಸಂಚಾರ ನಿರ್ಬಂಧಕ್ಕೆ ಆದೇಶ ನೀಡಲಾಗಿತ್ತು. ಆದರೆ ಮೋದಿ ಕಾರ್ಯಕ್ರಮ ಮುಗಿಸಿ ತೆರಳುತ್ತಿದ್ದ ಬೆನ್ನಲ್ಲೇ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

ಮದ್ದೂರು ತಾಲೂಕು ಗೆಜ್ಜಲಗೆರೆ ಕಾಲೋನಿ ಬಳಿ ಹೆದ್ದಾರಿ ಉದ್ಘಾಟನಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಹೀಗಾಗಿ ಇಂದು ಬೆಳಗ್ಗೆ ಅಗತ್ಯಸೇವೆ ಮತ್ತು ಹಾಲಿನ ವಾಹನಗಳಿಗೆ ಮಾತ್ರ ಬೆಳಗ್ಗೆ 9 ಗಂಟೆಯವರೆಗೆ ಸವೀರ್‍ಸ್‌ ರಸ್ತೆಯಲ್ಲಿ ತೆರಳಲು ಅವಕಾಶ ಕಲ್ಪಿಸಲಾಗಿತ್ತು. ಪ್ರಧಾನಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಬರುವ ವಾಹನಗಳಿಗೆ ಬೆಳಗ್ಗೆ 9.30 ಗಂಟೆಯವರೆಗೆ ಮಾತ್ರ ಅವಕಾಶ ನೀಡಲಾಗಿತ್ತು. ಮೋದಿ ಕಾರ್ಯಕ್ರಮ ಮುಗಿಸಿ ಧಾರವಾಡಕ್ಕೆ ತೆರಳಿದ ಬೆನ್ನಲ್ಲೇ ಹೆದ್ದಾರಿಯನ್ನು ಸಂಚಾರಕ್ಕೆ ಮುಕ್ತ ಮಾಡಲಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!