ಫೆಬ್ರವರಿ ಅಂತ್ಯಕ್ಕೆ ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ಹೈವೇ ಉದ್ಘಾಟನೆ: ಕೇಂದ್ರ ಸಚಿವ ನಿತಿನ್ ಗಡ್ಕರಿ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಫೆಬ್ರವರಿ ಅಂತ್ಯಕ್ಕೆ ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ಹೈವ ಲೋಕಾರ್ಪಣೆಯಾಗಲಿದೆ. ಉದ್ಘಾಟನೆ ಕಾರ್ಯಕ್ರಮಕ್ಕೆ ಪ್ರಧಾನಿ ಅಥವಾ ರಾಷ್ಟ್ರಪತಿಗಳನ್ನು ಆಹ್ವಾನಿಸುತ್ತೇವೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಘೋಷಣೆ ಮಾಡಿದರು.

ಗುರುವಾರ ರಾಮನಗರಕ್ಕೆ ಹೆಲಿಕಾಫ್ಟರ್​ನಲ್ಲಿ ಆಗಮಿಸಿದ ನಿತಿನ್​ ಗಡ್ಕರಿ, ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯನ್ನು ಪರಿಶೀಲನೆ ನಡೆಸಿದರು.

ಇದಕ್ಕೂ ಮುನ್ನ ಭಾರತ್ ಮಾಲಾ ಯೋಜನೆಯಡಿ ನಿರ್ಮಾಣ ಆಗುತ್ತಿರುವ ಚೆನ್ನೈ ಎಕ್ಸ್‌ಪ್ರೆಸ್ ಹೈವೆ ಕಾಮಗಾರಿಯನ್ನು ಹೊಸಕೋಟೆ ತಾಲೂಕಿನ ಕರಿಬೀರನಹೊಸಹಳ್ಳಿ ಪರಿಶೀಲನೆ ನಡೆಸಿದರು. ಬಳಿಕ ಬಸ್​ನಲ್ಲಿ ತೆರಳಿ ದಶಪಥ ಹೆದ್ದಾರಿಯನ್ನು ಪರಿಶೀಲಿಸಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ನಿತಿನ್ ಗಡ್ಕರಿ, ಮುಂದಿನ ತಿಂಗಳು ಪ್ರಧಾನಿ ನರೇಂದ್ರ ಮೋದಿ ಅಥವಾ ರಾಷ್ಟ್ರಪತಿಗಳು ದಶಪಥ ಹೆದ್ದಾರಿಯನ್ನು ಉದ್ಘಾಟಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಇನ್ನು ಸ್ಥಳೀಯ ಶಾಸಕರು ಮತ್ತು ಸಂಸದರು ಒಂದಷ್ಟು ಸಲಹೆ ನೀಡಿದ್ದಾರೆ. ಎಲ್ಲವನ್ನೂ ಪರಿಶೀಲನೆ ಮಾಡಲಾಗುವುದು. ಹೆದ್ದಾರಿ ಕಂಪ್ಲೀಟ್ ಆದ್ರೆ 90 ನಿಮಿಷದಲ್ಲಿ ಬೆಂಗಳೂರು-ಮೈಸೂರು ನಡುವೆ ಸಂಚಾರ ಮಾಡಬಹುದು. ಹೆದ್ದಾರಿಯಿಂದ ಮೈಸೂರು, ಶ್ರೀರಂಗಪಟ್ಟಣ ಪ್ರವಾಸೋದ್ಯಮ ಅಭಿವೃದ್ಧಿಯಾಗಲಿದೆ. ಪಬ್ಲಿಕ್ ಟ್ರಾನ್ಸ್‌ಪೋರ್ಟ್​ಗೂ ಹೆಚ್ಚಿನ ಒತ್ತು ನೀಡ್ತೇವೆ. ರಾಮನಗರ ಹಾಗೂ ಮಂಡ್ಯ ಜಿಲ್ಲೆಗೆ ಕನೆಕ್ಟಿವಿಟಿ ಸುಗಮ ಆಗಲಿದೆ. ಐಟಿ ಉದ್ಯಮಕ್ಕೂ ಇದು ಅನುಕೂಲ ಎಂದರು.

ಅಶ್ವಥನಾರಾಯಣ್, ಗೋಪಾಲಯ್ಯ, ಪ್ರತಾಪ್​ ಸಿಂಹ, ಡಿ.ಕೆ.ಸುರೇಶ್​, ಸಿ.ಪಿ.ಯೋಗೇಶ್ವರ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

4,473 ಕೋಟಿ ರೂ. ವೆಚ್ಚದಲ್ಲಿ ಒಟ್ಟು 118 ಕಿ.ಮೀ ಉದ್ದದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಮೊದಲ ಹಂತದ ಕಾಮಗಾರಿಯು ಬೆಂಗಳೂರಿನ ಪಂಚಮುಖಿ ಆಂಜನೇಯ ದೇವಾಲಯದಿಂದ ಹಿಡಿದು ನಿಡಘಟ್ಟದವರೆಗೆ ಹಾಗೂ ನಿಡಘಟ್ಟದಿಂದ ಮೈಸೂರಿನ ವರೆಗೂ ಎರಡನೇ ಹಂತದ ಕಾಮಗಾರಿ ನಡೆಯುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!