ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಏಪ್ರಿಲ್ ಒಂದರಿಂದ ಜಾರಿಗೆ ಬರಬೇಕಾಗಿದ್ದ ಟೋಲ್ ಬೆಲೆ ಹೆಚ್ಚಳ ಆದೇಶವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಿಂಪಡೆದಿದೆ.
ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ದರವನ್ನು ಪರಿಷ್ಕರಿಸಿ ಹೆಚ್ಚಳ ಮಾಡಲಾಗಿತ್ತು. ಆದರೆ ಸಾರ್ವಜನಿಕರಿಂದ ತೀವ್ರ ವಿರೋಧ ಬಂದ ಹಿನ್ನೆಲೆಯಲ್ಲಿ ತನ್ನ ಆದೇಶವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ವಾಪಸ್ ಪಡೆದಿದೆ. ಸದ್ಯಕ್ಕೆ ಹಳೆ ದರವನ್ನೇ ಮುಂದುವರಿಸಲು ನಿರ್ಧರಿಸಲಾಗಿದೆ ಎಂದು ಪ್ರಾಧಿಕಾರ ಹೇಳಿದೆ.
ದೇಶಾದ್ಯಂತ ಏಕಕಾಲದಲ್ಲಿ ಹೆದ್ದಾರಿ ಟೋಲ್ ದರ ಹೆಚ್ಚಳ ಮಾಡಲಾಗಿದ್ದು, ಅದರ ಭಾಗವಾಗಿ ಬೆಂಗಳೂರು-ಮೈಸೂರು ಹೆದ್ದಾರಿಯ ಟೋಲ್ ಕೂಡಾ ಏರಿಕೆ ಮಾಡಲಾಗಿತ್ತು. ಟೋಲ್ ಆರಂಭವಾದ 17 ದಿನಕ್ಕೆ ದರ ಏರಿಕೆ ಮಾಡಿರೋದಕ್ಕೆ ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದರು. ಸಾರ್ವಜನಿಕರ ಒತ್ತಡಕ್ಕೆ ಮಣಿದು ದರ ಹೆಚ್ಚಳ ವಾಪಸ್ಸ್ ಪಡೆದುಕೊಂಡಿದೆ. ಈ ಕುರಿತು ಟೋಲ್ ಗೇಟ್ ಬಳಿ ಬೋರ್ಡ್ ಅಳವಡಿಸಲಾಗಿದೆ.