ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಸುರಿದ ಮಳೆಗೆ ವಾಹನ ಸವಾರರು ಹೈರಾಣಾಗಿದ್ದಾರೆ. ಮಳೆಯಿಂದಾಗಿ ಹಳ್ಳದ ನೀರು ಹರಿದು ಹೋಗದೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಗೆ ತುಂಬಿದೆ ಇದರಿಂದಾಗಿ 8 ಕಿಮೀ ತನಕ ಟ್ರಾಫಿಕ್ ಜಾಮ್ ಉಂಟಾಗಿದೆ.
ಸವಾರರು ಗಂಟೆಗಟ್ಟಲೇ ರಸ್ತೆಯಲ್ಲಿ ಸಿಲುಕಿ ಒದ್ದಾಡಿದ್ದಾರೆ. ರಜೆ ಮೂಡ್ ಮುಗಿಸಿ ಬೆಂಗಳೂರಿಗೆ ಮರಳುತ್ತಿದ್ದ ಪ್ರಯಾಣಿಕರಿಗೆ ಮಳೆಯಿಂದಾಗಿ ಕಿರಿಕಿರಿ ಅನುಭವಿಸಿದ್ದಾರೆ. ಸಂಗಬವಸನದೊಡ್ಡಿಯಿಂದ ಬಿಡದಿವರೆಗೆ ರಸ್ತೆಯಲ್ಲಿ ನೀರು ಹರಿದಿದೆ. ರಸ್ತೆಯಲ್ಲಿ ನದಿಯಂತೆ ನೀರು ಹರಿದಿದೆ.
ಈ ಹಿಂದೆಯೂ ಮಳೆ ನೀರು ನಿಂತು ಅವಾಂತರ ಸೃಷ್ಟಿಯಾಗಿದ್ದು, ದುಬಾರಿ ಟೋಲ್ ನೀಡಿದರೂ ಸಮಸ್ಯೆಗೆ ಪರಿಹಾರ ಸಿಗುತ್ತಿಲ್ಲ ಎಂದು ಜನರು ದೂಷಿಸುತ್ತಿದ್ದಾರೆ.