ಬೆಂಗಳೂರನ್ನು ಡ್ರಗ್ಸ್​ ಮತ್ತು ರೌಡಿಸಂ ಮುಕ್ತ ನಗರವನ್ನಾಗಿಸುವುದೇ ನಮ್ಮ ಮೊದಲ ಆದ್ಯತೆ: ಡಿಜಿ ಐಜಿಪಿ ಅಲೋಕ್ ಮೋಹನ್

ಹೊಸ ದಿಗಂತ ಡಿಜಿಟಲ್ ಡೆಸ್ಕ್

ಪೊಲೀಸ್ ಇಲಾಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಅವರು ಕೊಟ್ಟ ಖಡಕ್ ಸೂಚನೆ ನೀಡಿದ ಬೆನ್ನಲ್ಲೇ ನಗರದ ಎಲ್ಲಾ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ನೂತನ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಸಭೆ ಕರೆದಿದ್ದರು.

ಬಳಿಕ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಅವರು, ಬೆಂಗಳೂರನ್ನು ‘ ರೌಡಿಸಂ ಮುಕ್ತ ಮಾಡುವುದು ನಮ್ಮ ಮೊದಲ ಆದ್ಯತೆ. ನಂತರ ಡ್ರಗ್ಸ್ ಮುಕ್ತ ನಗರವನ್ನಾಗಿ ಮಾಡುತ್ತೇವೆ. ನಗರದಲ್ಲಿ ನಡೆಯುವ ಯಾವುದೇ ಅಕ್ರಮ ಚಟುವಟಿಕೆಗಳನ್ನ ಸಹಿಸುವುದಿಲ್ಲ ಎಂದು ಹೇಳಿದರು.

ಸಾರ್ವಜನಿಕರೊಂದಿಗೆ ಪೊಲೀಸರು ಜನಸ್ನೇಹಿ ಮತ್ತು ಉತ್ತಮ ವರ್ತನೆ ತೋರುವುದು ಸಹ ಕಡ್ಡಾಯವಾಗಬೇಕು. ಸಿಬ್ಬಂದಿಗಳ ದೈಹಿಕ ಸಾಮರ್ಥ್ಯದ ಬಗ್ಗೆ ಗಮನ ಹರಿಸಲಾಗುವುದು. ಯಾರಿಗೂ ಬೆಂಗಳೂರಿನಲ್ಲಿ ಸಮಸ್ಯೆಯುಂಟು ಮಾಡಲು ಅವಕಾಶ ನೀಡುವುದಿಲ್ಲ. ಸಂಚಾರಿ ವ್ಯವಸ್ಥೆ ಬಗ್ಗೆ ಸಾಕಷ್ಟು ಚರ್ಚೆ ಮಾಡಲಾಗಿದೆ ಎಂದು ಅಲೋಕ್ ಮೋಹನ್ ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!