ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ರೇವ್ ಪಾರ್ಟಿಯೊಂದರ ಮೇಲೆ ಸಿಸಿಬಿ ದಾಳಿ ನಡೆಸಿದ್ದು, ಅಪಾರ ಪ್ರಮಾಣದ ಡ್ರಗ್ಸ್ ಪತ್ತೆಯಾಗಿದೆ. ಈ ಪ್ರಕರಣದಲ್ಲಿ ಐವರನ್ನು ಬಂಧಿಸಲಾಗಿದ್ದು. ಬಂಧಿತ ಐವರಲ್ಲಿ ಮೂವರು ಮಾದಕ ದ್ರವ್ಯ ಮಾರಾಟಗಾರರು ಎಂದು ತಿಳಿದುಬಂದಿದೆ.
ಸಿಂಗೇನಾ ಅಗ್ರಹಾರದ ಫಾರ್ಮ್ಹೌಸ್ನಲ್ಲಿ ರೇವ್ ಪಾರ್ಟಿ ನಡೆಸುತ್ತಿದ್ದ ಬಗ್ಗೆ ಮಾಹಿತಿ ಪಡೆದ ಸಿಸಿಬಿ, ದಾಳಿ ನಡೆಸಿ ಅಪಾರ ಪ್ರಮಾಣದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ.
ಪೊಲೀಸರ ದಾಳಿ ವೇಳೆ 45 ಗ್ರಾಂ ಡ್ರಗ್ಸ್, ಎಂಡಿಎಂಎ, ಕೊಕೇನ್ ಸೇರಿದಂತೆ ಹಲವು ಬಗೆಯ ಡ್ರಗ್ಸ್ ಪತ್ತೆಯಾಗಿದೆ. ಈ ಪಾರ್ಟಿಯಲ್ಲಿ ತೆಲುಗಿನ ಕೆಲ ನಟಿಯರು, ಮಾಡೆಲ್ ಗಳೂ ಭಾಗವಹಿಸಿದ್ದರು ಎಂದು ಗೊತ್ತಾಗಿದೆ. 25ಕ್ಕೂ ಹೆಚ್ಚು ಯುವತಿಯರು ಪಾರ್ಟಿಯಲ್ಲಿ ಪಾಲ್ಗೊಂಡಿದ್ದರು. ಈ ಕಾರ್ಯಕ್ರಮದಲ್ಲಿ ಆಂಧ್ರಪ್ರದೇಶ, ಬೆಂಗಳೂರಿನಿಂದ 100 ಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು. ಈ ಕುರಿತು ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.