ಬೆಂಗಳೂರಿನ ರೇವ್ ಪಾರ್ಟಿ: ನಟಿ ಹೇಮಾ ಆ್ಯಂಡ್ ಟೀಮ್‌ ಗೆ ಸಿಸಿಬಿಯಿಂದ ಎರಡನೇ ನೊಟೀಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಬೆಂಗಳೂರಿನ ರೇವ್ ಪಾರ್ಟಿ (Rave Party) ಪ್ರಕರಣದ ವಿಚಾರಣೆಗೆ ತೆಲುಗು ಸಿನಿಮಾ ನಟಿ ಹೇಮಾ ಸೇರಿದಂತೆ ಇತರರು ಗೈರಾಗಿದ್ದು, ಹೀಗಾಗಿ ತೆಲುಗು ನಟಿ ಹೇಮಾ (Actress Hema) ಆ್ಯಂಡ್ ಟೀಮ್‌ಗೆ ಸಿಸಿಬಿ ಪೊಲೀಸರು ಎರಡನೇ ನೊಟೀಸ್ ನೀಡಿದ್ದಾರೆ.

ಸೋಮವಾರ (ಮೇ 27) ವಿಚಾರಣೆಗೆ ಹಾಜರಾಗುವಂತೆ ನಟಿ ಹೇಮಾ ಸೇರಿ ಎಂಟು ಮಂದಿಗೆ ಸಿಸಿಬಿ ನೊಟೀಸ್ ನೀಡಿತ್ತು. ವಿಚಾರಣೆಗೆ ಹಾಜರಾಗಲು 7 ದಿನಗಳ ಕಾಲಾವಕಾಶ ಕೋರಿ ಸಿಸಿಬಿ ಅಧಿಕಾರಿಗಳಿಗೆ ಮನವಿ ಮಾಡಿದ್ದರು. ಈ ಬೆನ್ನಲ್ಲೇ ನಟಿ ಹೇಮಾ ಆ್ಯಂಡ್ ಟೀಮ್‌ಗೆ ಸಿಸಿಬಿ ಅಧಿಕಾರಿಗಳು ಎರಡನೇ ನೊಟೀಸ್ (Notice) ನೀಡಿದ್ದಾರೆ.

ಪಾರ್ಟಿ ಆಯೋಜನೆ ಮಾಡಿದ್ದ ವಾಸು, ಅರುಣ್, ಸಿದ್ದಿಕಿ, ನಾಗಬಾಬು ಸೇರಿ ಐವರಿಗೆ ಮೇ 27ರಂದು ಹತ್ತು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲು ಕೋರ್ಟ್ ಆದೇಶಿಸಿದೆ.

ಅಂದಹಾಗೆ, ರೇವ್ ಪಾರ್ಟಿ ವಿಚಾರ ಬಯಲಾಗುತ್ತಿದ್ದಂತೆಯೇ ನಟಿ ಹೇಮಾ ಅವರು ವೀಡಿಯೋ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದರು. ವೀಡಿಯೋದಲ್ಲಿ ನಾನು ಹೈದರಾಬಾದ್‌ನಲ್ಲಿ ಇರುವುದಾಗಿ ಹೈಡ್ರಾಮಾ ಮಾಡಿದ್ದರು. ಇತ್ತ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಅವರು ಹೇಮಾ ಅವರು ಡ್ರಗ್ಸ್ ಪಾರ್ಟಿಯಲ್ಲಿ ಇದ್ದರು ಎಂಬುದಾಗಿ ಸ್ಪಷ್ಟನೆ ನೀಡಿದ್ದರು.

ಹೇಮಾ ಅವರ ರಕ್ತದ ಮಾದರಿ ತೆಗೆದುಕೊಂಡು ಅವರನ್ನು ಕಳುಹಿಸಲಾಗಿದೆ. ಮೆಡಿಕಲ್ ಟೆಸ್ಟ್ ಬಳಿಕ ಸ್ಟೇಷನ್ ಬೇಲ್ ಮೇಲೆ ಹೇಮಾರನ್ನು ಬಿಡುಗಡೆ ಮಾಡಲಾಗಿದೆ ಎಂದು ದಯಾನಂದ್ ಹೇಳಿದ್ದರು. ಅಲ್ಲದೇ ಪಾರ್ಟಿಯಲ್ಲಿ ಭಾಗವಹಿಸಿದ್ದ 103 ಮಂದಿಯ ಪೈಕಿ 86 ಮಂದಿಯ ಬ್ಲಡ್ ರಿಪೋರ್ಟ್ ಪಾಸಿಟಿವ್ ಬಂದಿತ್ತು.73 ಮಂದಿ ಪುರುಷರಲ್ಲಿ 59 ಮಂದಿ ಹಾಗೂ 30 ಮಂದಿ ಮಹಿಳೆಯರ ಪೈಕಿ 27 ಮಂದಿಯ ಬ್ಲಡ್ ರಿಪೋರ್ಟ್ ಪಾಸಿಟಿವ್ ಎಂದು ಬಂದಿತ್ತು. ಈ ಮೂಲಕ ಪಾರ್ಟಿಯಲ್ಲಿ ಸೇರಿದ್ದ ಬಹುತೇಕ ಮಂದಿ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!