ಬೆಂಗಳೂರು ನಿವಾಸಿಗಳೇ ಗಮನಿಸಿ: ನೇರಳೆ ಮಾರ್ಗದ ಮೆಟ್ರೋ ರೈಲು ಸೇವೆಗಳಲ್ಲಿ ಬದಲಾವಣೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ರಾಜ್ಯ ರಾಜಧಾನಿ ಬೆಂಗಳೂರಿನ ಬೈಯಪ್ಪನಹಳ್ಳಿಯಿಂದ ಕೃಷ್ಣರಾಜಪುರ ಮೆಟ್ರೋ (Metro) ನಿಲ್ದಾಣದದವರೆಗೆ ಮೆಟ್ರೋ ಸೇವೆಗಳನ್ನು ವಿಸ್ತರಿಸುವ ಸಲುವಾಗಿ ಆಗಸ್ಟ್​ 10, 11 ಮತ್ತು 14ರಂದು ಮುಂಜಾನೆ 5.00 ಗಂಟೆಯಿಂದ ಬೆಳಗ್ಗೆ 7.00 ಗಂಟೆಯವರೆಗೆ ನೇರಳೆ ಮಾರ್ಗದ ಮೆಟ್ರೋ ರೈಲು ಸೇವೆಗಳಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಬಿಎಂಆರ್​ಸಿಎಲ್​ ತಿಳಿಸಿದೆ.

ಬೈಯಪ್ಪನಹಳ್ಳಿ ಟರ್ಮಿನಲ್‌ನಿಂದ ಸ್ವಾಮಿ ವಿವೇಕಾನಂದ ರಸ್ತೆ ಮೆಟ್ರೋ ನಿಲ್ದಾಣ ಹಾಗೂ ಕೃಷ್ಣರಾಜಪುರ ಮತ್ತು ವೈಟ್‌ ಫೀಲ್ಡ್ (ಕಾಡುಗೋಡಿ) ನಿಲ್ದಾಣಗಳವರೆಗೆ ಮುಂಜಾನೆ 5.00 ಗಂಟೆಯಿಂದ ಬೆಳಗ್ಗೆ 7.00 ಗಂಟೆಯವರೆಗೆ ಸಿಗ್ನಲಿಂಗ್ ಮತ್ತು ಇತರ ಸಂಬಂಧಿತ ಕಾಮಗಾರಿಗಾಗಿ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗಿತ್ತು. ಸದರಿ ಕಾಮಗಾರಿಯನ್ನು ಪೂರ್ಣಗೊಳಿಸಲು ಆಗಸ್ಟ್ 10, 11 ರವರೆಗೆ​ ಮತ್ತೆ ಸ್ಥಗಿತಗೊಳಿಸಲಾಗುತ್ತಿದೆ.

ಸದರಿ ದಿನಗಳಂದು ಬೆಳ್ಳಿಗೆ 5.00 ಗಂಟೆಯಿಂದ 7.00 ಗಂಟೆಯವರೆಗೆ ಸ್ವಾಮಿ ವಿವೇಕಾನಂದ ರಸ್ತೆ ಮೆಟ್ರೋ ನಿಲ್ದಾಣದಿಂದ ಕೆಂಗೇರಿ ನಿಲ್ದಾಣದವರೆಗೆ ಮೆಟ್ರೋ ರೈಲು ಸೇವೆಗಳು ಲಭ್ಯವಿರುತ್ತದೆ. ಇದಲ್ಲದೆ, ಕೆಂಗೇರಿ ನಿಲ್ದಾಣದಿಂದ ರೈಲು ಸೇವೆಯನ್ನು ಚಲ್ಲಘಟ್ಟ ನಿಲ್ದಾಣದವರೆಗೆ ವಿಸ್ತರಿಸಲು ಸಿಗ್ನಲಿಂಗ್ ಮತ್ತು ಇತರ ಸಂಬಂಧಿತ ಕಾಮಗಾರಿಗಳಿಗಾಗಿ ಆಗಸ್ಟ್​​ 14 ರಂದು ಮುಂಜಾನೆ 5.00 ಗಂಟೆಯಿಂದ ಬೆಳಗ್ಗೆ 7.00 ಗಂಟೆಯವರೆಗೆ ಕೆಂಗೇರಿ ಮತ್ತು ವಿಜಯನಗರ ಮೆಟ್ರೋ ನಿಲ್ದಾಣಗಳ ನಡುವೆ ಯಾವುದೇ ಮೆಟ್ರೋ ಸೇವೆಗಳು ಇರುವುದಿಲ್ಲ.

ಈ ಸಮಯದಲ್ಲಿ ಬೈಯಪ್ಪನಹಳ್ಳಿ ಮತ್ತು ವಿಜಯನಗರ ಮೆಟ್ರೋ ನಿಲ್ದಾಣಗಳ ನಡುವೆ ರೈಲು ಸೇವೆ ಲಭ್ಯವಿರುತ್ತದೆ. ಬೆಳಿಗ್ಗೆ 7.00 ಗಂಟೆಯ ನಂತರ, ಬೈಯಪ್ಪನಹಳ್ಳಿ ಮತ್ತು ಕೆಂಗೇರಿ, ಕೃಷ್ಣರಾಜಪುರ ಮತ್ತು ವೈಟ್‌ಫೀಲ್ಡ್ (ಕಾಡುಗೋಡಿ) ಮೆಟ್ರೋ ನಿಲ್ದಾಣಗಳ ನಡುವೆ ಎಂದಿನಂತೆ ಮೆಟ್ರೋ ರೈಲು ಸೇವೆಗಳು ರಾತ್ರಿ 11.00 ರವರೆಗೆ ಲಭ್ಯವಿರುತ್ತವೆ.

ಹಸಿರು ಮಾರ್ಗದ ರೈಲು ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!