ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ರಸ್ತೆ ಗುಂಡಿಗೆ ಮತ್ತೊಂದು ಜೀವ ಬಲಿತೆಗೆದುಕೊಂಡಿದೆ.ಇತ್ತೀಚೆಗೆ ರಾಜಾಜಿನಗರದ ಸುಜಾತ ಥಿಯೇಟರ್ ಬಳಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ತಾಯಿ-ಮಗಳು ರಸ್ತೆಗುಂಡಿ ತಪ್ಪಿಸಲು ಹೋಗಿ ಬಿದ್ದು ತಾಯಿಯ ಮೇಲೆ ಕೆಎಸ್ ಆರ್ ಟಿಸಿ ಬಸ್ಸು ಹರಿದು ಗಂಭೀರ ಗಾಯಗೊಂಡು ಮೃತಪಟ್ಟಿದ್ದರು. ಇದೀಗ ಮತ್ತೊಂದು ಬಲಿ ಪಡೆದಿದೆ. ಯಲಹಂಕದ ಅಟ್ಟೂರು ಬಡಾವಣೆಯಲ್ಲಿ ನಿನ್ನೆ ರಾತ್ರಿ ನಡೆದ ದುರ್ಘಟನೆಯಲ್ಲಿ ಬೈಕ್ ಸವಾರರೊಬ್ಬರು ಮೃತಪಟ್ಟಿದ್ದಾರೆ.
ಗುಂಡಿ ತಪ್ಪಿಸಲು ಹೋಗಿ ಕಾರೊಂದು ಪಲ್ಟಿಯಾಗಿದ್ದು, ಆ ಸಂದರ್ಭದಲ್ಲಿ ಮುಂದೆ ಬರುತ್ತಿದ್ದ ಬೈಕ್ ಕಾರಿಗೆ ಡಿಕ್ಕಿ ಹೊಡೆದಿದೆ, ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೋರ್ವ ಯುವಕನಿಗೆ ಗಂಭೀರ ಗಾಯಗಳಾಗಿವೆ.
ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ರಸ್ತೆಗುಂಡಿ ಬಿದ್ದಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯವನ್ನು ಬಿಬಿಎಂಪಿ ಚುರುಕುಗೊಳಿಸುವುದಾಗಿ ಹೇಳಿದೆ. ಈ ಮಧ್ಯೆ ಇನ್ನೆಷ್ಟು ಜೀವ ಬಲಿಯಾಗಬೇಕೋ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕುತ್ತಿದ್ದಾರೆ