ಸಾಂಕ್ರಾಮಿಕವಲ್ಲದ ಕಾಯಿಲೆಗಳಿಂದ ಬಳಲುತ್ತಿದ್ದಾರೆ ಬೆಂಗಳೂರು ಸ್ಲಂ ನಿವಾಸಿಗಳು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ಸ್ಲಂ ನಿವಾಸಿಗಳು ಸಾಂಕ್ರಾಮಿಕವಲ್ಲದ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಹೌದು, ಎನ್‌ಜಿಒ ಲೇಬರ್ನೆಟ್ ನಡೆಸಿದ ಸಮೀಕ್ಷೆಯಿಂದ ಈ ವಿಷಯ ಬೆಳಕಿಗೆ ಬಂದಿದೆ. ಆಗಸ್ಟ್ ಮತ್ತು ಅಕ್ಟೋಬರ್ ತಿಂಗಳ ನಡುವೆ ಸಮೀಕ್ಷೆ ನಡೆದಿದೆ. ಈ ಸಮೀಕ್ಷೆಯಲ್ಲಿ ಕೊಳಗೇರಿ ನಿವಾಸಿಗಳು ಸಾಂಕ್ರಾಮಿಕವಲ್ಲದ ರೋಗಗಳಿಗೆ ತುತ್ತಾಗಿರುವುದು ಕಂಡುಬಂದಿದೆ.

ಒಟ್ಟಾರೆ 36.034 ಕೊಳಗೇರಿ ನಿವಾಸಿಗಳನ್ನು ಸಮೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ ಶೇ.6.25 ನಷ್ಟು ಮಂದಿ ಅಧಿಕ ಬಿಪಿ ಹಾಗೂ ಶೇ.4.7 ರಷ್ಟು ಮಂದಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವುದು ಕಂಡುಬಂದಿದೆ.

ಶೇ. 7.88 ರಷ್ಟು ಮಂದಿ ಟೈಪ್-2 ಡಯಾಬಿಟಿಸ್ ಹೊಂದಿದ್ದಾರೆ, ಇನ್ನು ಶೇ.22.2ರಷ್ಟು ಮಂದಿ ಪೂರ್ವ ಮಧುಮೇಹವನ್ನು ಹೊಂದಿದ್ದಾರೆ.

ಹೆಚ್ಚಿನ ಸ್ಲಮ್ ನಿವಾಸಿಗಳು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿನ ವ್ಯವಸ್ಥೆಗಳನ್ನು ಬಳಸುತ್ತಿಲ್ಲ ಎಂದು ಸಮೀಕ್ಷೆ ಹೇಳಿದೆ. ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ಸಮಸ್ಯೆಗಳು ಮೇಲ್ಮಧ್ಯಮ ವರ್ಗದವರಲ್ಲಿ ಹೆಚ್ಚು ಸಾಮಾನ್ಯವಾಗಿರುವ ಜೀವನಶೈಲಿ ರೋಗಗಳಾಗಿವೆ ಎಂದು ಲೇಬರ್ನೆಟ್‌ನ ಹಿರಿಯ ಉಪಾಧ್ಯಕ್ಷ ಡಾ. ಬಟೂಲ್ ಫಾತಿಮಾ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!