ಬೆಂಗಳೂರು ಟೆಕ್​ ಸಮಾವೇಶ: 20 ನೂತನ ಸ್ಟಾರ್ಟಪ್‌ ಉತ್ಪನ್ನಗಳ ಬಿಡುಗಡೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ಟೆಕ್​ ಸಮಾವೇಶದ ಎರಡನೆ ದಿನವಾದ ಗುರುವಾರ ಐಟಿ ಮತ್ತು ಬಿಟಿ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರು ಅಗ್ರಿಟೆಕ್‌, ಮೆಡ್‌ಟೆಕ್‌, ಎಜುಟೆಕ್‌ ಮುಂತಾದ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ವಿವಿಧ ಸ್ಟಾರ್ಟಪ್‌ಗಳು ಅಭಿವೃದ್ಧಿಪಡಿಸಿರುವ 20 ನೂತನ ಉತ್ಪನ್ನಗಳನ್ನು ಬಿಡುಗಡೆ ಮಾಡಿದರು.

ಈ ಸಂದರ್ಭ ಮಾತನಾಡಿದ ಸಚಿವರು, 2025ರ ಒಳಗೆ ಬೆಂಗಳೂರಿನಲ್ಲಿ 20 ಸಾವಿರ ನವೋದ್ಯಮಗಳ ಹೊಂದುವ ಗುರಿ ಇಟ್ಟುಕೊಳ್ಳಲಾಗಿತ್ತು. ಆದರೆ, ಈಗಾಗಲೇ ನಮ್ಮಲ್ಲಿ 22 ಸಾವಿರಕ್ಕೂ ಹೆಚ್ಚು ಸ್ಟಾರ್ಟಪ್‌ಗಳಿವೆ. ಬೆಂಗಳೂರಿನಲ್ಲಿರುವ ವಿಜ್ಞಾನ ಮತ್ತು ತಂತ್ರಜ್ಞಾನ ಕಾರ್ಯ ಪರಿಸರವೇ ಇದಕ್ಕೆ ಕಾರಣ. ವೆಂಚರ್ ಕ್ಯಾಪಿಟಲ್‌ ಕ್ಷೇತ್ರದಲ್ಲಿ ನಮ್ಮ ನಗರವು ಇಡೀ ಜಗತ್ತಿನಲ್ಲೇ 5ನೇ ಸ್ಥಾನದಲ್ಲಿದೆ ಎಂದರು.

ನೂತನ ಉತ್ಪನ್ನಗಳನ್ನು ಅಭಿವೃದ್ಧಿಪಡಿಸಿರುವ ಸ್ಟಾರ್ಟಪ್‌ಗಳಲ್ಲಿ ಹೆಚ್ಚಿನವು ಸರ್ಕಾರದ ನಾನಾ ಇನ್‌ಕ್ಯುಬೇಷನ್‌ ಕೇಂದ್ರಗಳ ಮಾರ್ಗದರ್ಶನ ಮತ್ತು ನೆರವು ಪಡೆದುಕೊಂಡಿದ್ದವು. ಈ ನಿಟ್ಟಿನಲ್ಲಿ ನಮ್ಮ ಕೆ-ಟೆಕ್‌ ನಾವೀನ್ಯತಾ ಹಬ್‌ಗಳು, ಉತ್ಕೃಷ್ಟತಾ ಕೇಂದ್ರಗಳು, ಟೆಕ್ನಾಲಜಿ ಬಿಜಿನೆಸ್‌ ಪರಿಪೋಷಣಾ ಕೇಂದ್ರಗಳು, ಸಿ-ಕ್ಯಾಂಪ್‌, ಭಾರತೀಯ ವಿಜ್ಞಾನ ಸಂಸ್ಥೆ, ನಾಸ್ಕಾಂ ಮತ್ತು ಐಎಎಂಎಐ ತರಹದ ಸಂಸ್ಥೆಗಳು ಮಹತ್ವದ ಪಾತ್ರ ವಹಿಸಿರುವುದು ಶ್ಲಾಘನೀಯ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!