ಹೊಸದಿಗಂತ ಡಿಜಿಟಲ್ ಡೆಸ್ಕ್:
25 ನೇ ವರ್ಷದ ಪ್ರತಿಷ್ಠಿತ ಬೆಂಗಳೂರು ತಂತ್ರಜ್ಞಾನ ಸಮಾವೇಶಕ್ಕೆ ಶುಕ್ರವಾರ ತೆರೆಬಿದ್ದಿದ್ದು, ಯಶಸ್ವಿ ಸಮ್ಮೇಳನ ಇದಾಗಿದೆ.
ಸಿಎಂ ಬೊಮ್ಮಾಯಿ ಮತ್ತು ಕೇಂದ್ರ ವಾಣಿಜ್ಯ ಹಾಗೂ ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರ ಸಮ್ಮುಖದಲ್ಲಿ ಐಟಿ-ಬಿಟಿ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಅವರು ಐದು ಘೋಷಣೆಗಳನ್ನು ಘೋಷಿಸಿದರು. ಐದು ಹೆಗ್ಗುರಿಗಳ ಜತೆ ೨೫ನೇ ವರ್ಷದ ಪ್ರತಿಷ್ಠಿತ ಬೆಂಗಳೂರು ತಂತ್ರಜ್ಞಾನ ಸಮಾವೇಶಕ್ಕೆ ತೆರೆ ಬಿದ್ದಿದೆ.
ಒಟ್ಟು 32 ದೇಶಗಳು ಸಮಾವೇಶದಲ್ಲಿ ಪಾಲ್ಗೊಂಡಿದ್ದು, 4.52 ಲಕ್ಷ ಮಂದಿ ಸಮಾವೇಶದಲ್ಲಿ ಭಾಗಿಯಾಗಿದ್ದಾರೆ. ಸಾಮಾಜಿಕ ಮಾಧ್ಯಮಗಳ ಮೂಲಕ ಸಮಾವೇಶ 4.99 ಕೋಟಿ ಮಂದಿಯನ್ನು ತಲುಪಿದೆ ಎಂದು ಸಚಿವ ಅಶ್ವತ್ಥನಾರಾಯಣ್ ಹೇಳಿದ್ದಾರೆ.
ಐದು ಘೋಷಣೆಗಳು ಹೀಗಿವೆ..
- ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಸ್ಟಾರ್ಟಪ್ ಪಾರ್ಕ್
- 50 ಕಾಲೇಜುಗಳಲ್ಲಿ ಆಧುನಿಕ ತಾಂತ್ರಿಕ ಪ್ರಯೋಗಾಲಯಗಳು
- ವಿಶ್ವವಿದ್ಯಾಲಯಗಳಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಆವಿಷ್ಕಾರ ಕೇಂದ್ರಗಳ ಆರಂಭ
- ಶಿಕ್ಷಣ ಸಂಸ್ಥೆಗಳು ಮತ್ತು ಐಟಿ, ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಕಂಪನಿಗಳ ನಡುವೆ ಗಾಢ ಸಂಬಂಧ
- ಶೈಕ್ಷಣಿಕ ಸಂಸ್ಥೆಗಳು ಹಾಗೂ ಸಂಶೋಧನಾ ಸಂಸ್ಥೆಗಳ ನಡುವೆ ನಿಕಟ ಬಾಂಧವ್ಯ