Sunday, December 10, 2023

Latest Posts

ಭಾರತದ ಗ್ರೀನ್ ಆಫೀಸ್ ಸ್ಪೇಸ್ ಪಟ್ಟಿಯಲ್ಲಿ ಬೆಂಗಳೂರು ಅಗ್ರ ಸ್ಥಾನ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಭಾರತದ ಗ್ರೀನ್ ಆಫೀಸ್ ಸ್ಪೇಸ್(ಹಸಿರು ಕಚೇರಿ ಸ್ಥಳಾವಕಾಶ)ಪಟ್ಟಿಯಲ್ಲಿ ಬೆಂಗಳೂರು ಅಗ್ರ ಸ್ಥಾನ ಪಡೆದಿದ್ದು, ಶೇಕಡಾ 30 ರಷ್ಟು ಅಂದರೆ 104.5 ಮಿಲಿಯನ್ ಚದರ ಅಡಿ ಹಸಿರು ಕಚೇರಿಗಳನ್ನು ಸಿಲಿಕಾನ್ ಸಿಟಿ ಹೊಂದಿದೆ.ರಾಷ್ಟ್ರ ರಾಜಧಾನಿ ಪ್ರದೇಶ(ಎನ್ಸಿಆರ್) ನಂತರದ ಸ್ಥಾನದಲ್ಲಿದೆ.

ಬುಧವಾರ ಬಿಡುಗಡೆಯಾದ ರಿಯಲ್ ಎಸ್ಟೇಟ್ ನ CII-CBRE ವರದಿಯ ಪ್ರಕಾರ, 70.2 ಮಿಲಿಯನ್ ಚದರ ಅಡಿಗಳೊಂದಿಗೆ ದೆಹಲಿ ಎನ್ ಸಿಆರ್ ಎರಡನೇ ಸ್ಥಾನದಲ್ಲಿದೆ.

ದೇಶದ ವಾಣಿಜ್ಯ ರಾಜಧಾನಿ ಮುಂಬೈ, 56.6 ಮಿಲಿಯನ್ ಚದರ ಅಡಿ ಹಸಿರು ಕಚೇರಿಗಳನ್ನು ಹೊಂದುವ ಮೂಲಕ ಮೂರನೇ ಸ್ಥಾನದಲ್ಲಿದೆ. ಹಸಿರು ಕಚೇರಿ ಸ್ಥಳಾವಕಾಶದ ಪಟ್ಟಿಯಲ್ಲಿ ಹೈದರಾಬಾದ್ ನಾಲ್ಕನೆ ಸ್ಥಾನದಲ್ಲಿದ್ದು, ಚೆನ್ನೈ ಮತ್ತು ಪುಣೆ ನಂತರದ ಸ್ಥಾನದಲ್ಲಿವೆ.

2019ಕ್ಕೆ ಹೋಲಿಸಿದರೆ 2023 ರ ಜೂನ್ನಲ್ಲಿ ಭಾರತದ ಅಗ್ರ ಆರು ನಗರಗಳಲ್ಲಿ ಹಸಿರು ಪ್ರಮಾಣೀಕೃತ ಕಚೇರಿ ಕಟ್ಟಡಗಳ ಪ್ರದೇಶ ಶೇ. 36 ರಷ್ಟು ಅಂದರೆ 342 ಮಿಲಿಯನ್ ಚದರ ಅಡಿಗಳಷ್ಟು ಹೆಚ್ಚಾಗಿದೆ ಎಂದು ವರದಿ ತಿಳಿಸಿದೆ.

ಗ್ರೀನ್ ಆಫೀಸ್ ಸ್ಪೇಸ್ ಎಂದರೆ ಪರಿಸರ ಜವಾಬ್ದಾರಿ ಮತ್ತು ಸಂಪನ್ಮೂಲ-ಸಮರ್ಥವಾಗಿರುವ ರಚನೆಯನ್ನು ಸೂಚಿಸುತ್ತದೆ. ಹಸಿರು ಕಚೇರಿಗಳನ್ನು ಇಂಧನ ದಕ್ಷತೆ ಮತ್ತು ಮರುಬಳಕೆ ವಸ್ತುಗಳಿಂದ ವಿನ್ಯಾಸಗೊಳಿಸಲಾಗಿರುತ್ತದೆ. ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವುದು, ಇಂಧನ ಉಳಿಸುವುದು ಮತ್ತು ಮಾಲಿನ್ಯ ಕಡಿಮೆ ಮಾಡುವುದು ಇದರ ಗುರಿಯಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!