July 1, 2026
Wednesday, July 1, 2026
spot_img

ಬೆಂಗಳೂರು ಟ್ರಾಫಿಕ್‌ ಸಮಸ್ಯೆ! ತ್ವರಿತ ಕ್ರಮಕ್ಕೆ ಹೈಕೋರ್ಟ್ ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೆಂಗಳೂರು ಜನರ ಬಹುದೊಡ್ಡ ಸಮಸ್ಯೆ ಟ್ರಾಫಿಕ್‌ ಜಾಮ್‌ಗೆ ಸಂಬಂಧಿಸಿದಂತೆ ಅಗತ್ಯ ಕ್ರಮ ಕೈಗೊಳ್ಳಿ ಎಂದು ಕರ್ನಾಟಕ ಹೈ ಕೋರ್ಟ್‌ ಸೂಚನೆ ನೀಡಿದೆ.

ವಕೀಲ ಎ.ವಿ. ಅಮರನಾಥನ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಬುಧವಾರ ವಜಾಗೊಳಿಸಿದೆ. ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ವಿಭಾಗೀಯ ಪೀಠ ಈ ಅರ್ಜಿಯನ್ನು ವಜಾಗೊಳಿಸಿದೆ.

ಟ್ರಾಫಿಕ್ ಸಮಸ್ಯೆಯನ್ನು ಕಾರ್ಯನಿರ್ವಾಹಕ ಅಧಿಕಾರಿಗಳೇ ಪರಿಹರಿಸಬೇಕಾದ ವಿಷಯವಾಗಿದ್ದು, ಈ ಕುರಿತು ಸಂಬಂಧಿಸಿದ ಇಲಾಖೆಗಳು ಕ್ರಮ ಕೈಗೊಳ್ಳಬೇಕೆಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ವಿಚಾರಣೆ ವೇಳೆ ಅರ್ಜಿದಾರರು ಖುದ್ದು ವಾದ ಮಂಡಿಸಿ, ಬೆಂಗಳೂರು ವಿಶ್ವದಲ್ಲೇ 2ನೇ ಸಂಚಾರ ದಟ್ಟಣೆಯ ನಗರವಾಗಿದ್ದು, ಜನರು ದಿನನಿತ್ಯ ಪರದಾಡುತ್ತಿದ್ದಾರೆ. ಸಂಚಾರ ದಟ್ಟಣೆ ಕುರಿತಂತೆ ತಮ್ಮ ಮಕ್ಕಳೂ ದೂರಿದ್ದಾರೆಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಆದ್ದರಿಂದ ಈ ಸಂಚಾರ ದಟ್ಟಣೆ ಪರಿಹಾರಕ್ಕೆ ಹೈಕೋರ್ಟ್ ಉಸ್ತುವಾರಿಯಲ್ಲಿ ತಜ್ಞರ ಸಮಿತಿ ರಚನೆ ಮಾಡಬೇಕು ಎಂದು ನ್ಯಾಯಪೀಠವನ್ನು ಕೋರಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !