ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರೀಯ ಸಂಸ್ಥೆ ಶ್ರೇಯಾಂಕ ಚೌಕಟ್ಟು ಶ್ರೇಯಾಂಕದಲ್ಲಿ ಬೆಂಗಳೂರು ವಿಶ್ವವಿದ್ಯಾಲಯ ರಾಷ್ಟ್ರಮಟ್ಟದ ಎಲ್ಲಾ ಪ್ರವರ್ಗಗಳಲ್ಲಿ 65ನೇ ಸ್ಥಾನಕ್ಕೆ ಭಾಜನವಾಗಿದೆ.
ರಾಷ್ಟ್ರಮಟ್ಟದ ಎಲ್ಲಾ ಸರ್ಕಾರಿ ವಿಶ್ವವಿದ್ಯಾಲಯಗಳ ಪಟ್ಟಿಯಲ್ಲಿ 26ನೇ ಸ್ಥಾನ ಪಡೆದಿದೆ. ಈ ಮೂಲಕ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಬೆಂಗಳೂರು ವಿಶ್ವವಿದ್ಯಾಲಯ ತನ್ನ ಸಾಧನೆ ಮುಂದುವರೆಸಿದೆ. 2024ರಲ್ಲಿ ಬೆಂಗಳೂರು ವಿಶ್ವವಿದ್ಯಾಲಯವು 81ನೇ ಸ್ಥಾನದಲ್ಲಿತ್ತು. ವಿದ್ಯಾರ್ಥಿ ಸ್ನೇಹಿ ವಾತವರಣ, ಅನುಭವಿ ಶಿಕ್ಷಕ ವರ್ಗ, ಅತ್ಯುತ್ತಮ ಪಠ್ಯಾಧಾರಿತ ಶಿಕ್ಷಣ, ತಂತ್ರಜ್ಞಾನಕ್ಕೆ ಆದ್ಯತೆ, ಕ್ರಿಯಾಶೀಲತೆ, ವಿದ್ಯಾರ್ಥಿ ಕೇಂದ್ರಿತ ಶಿಕ್ಷಣ ವಾತವರಣ ಒದಗಿಸಿರುವ ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಈ ಶ್ರೇಯಾಂಕ ಸಿಕ್ಕಿರುವುದು ವಿವಿ ಬದ್ದತೆ ಮತ್ತು ಪರಿಶ್ರಮಕ್ಕೆ ಸಾಕ್ಷಿಯಾಗಿದೆ.