ರಾಜಸ್ಥಾನ್​ ವಿರುದ್ಧ ಟಾಸ್ ಗೆದ್ದ ಬೆಂಗಳೂರು: ಬೌಲಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್

ಇಂದಿನ ಐಪಿಎಲ್ ಪಂದ್ಯದಲ್ಲಿ ರಾಜಸ್ಥಾನ್​ ರಾಯಲ್ಸ್​ ವಿರುದ್ಧ ರಾಯಲ್​ ಚಾಲೆಂಜರ್ಸ್​ ಬೆಂಗಳೂರುಟಾಸ್​ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಆರ್​ಸಿಬಿ ಮೊದಲ ಪಂದ್ಯದಲ್ಲಿ ಬ್ಯಾಟಿಂಗ್​ನಲ್ಲಿ ಅದ್ಭುತ ಪ್ರದರ್ಶನದ ಹೊರತಾಗಿಯೂ ಬೌಲಿಂಗ್​ನಲ್ಲಿ ಕಳಪೆ ಪ್ರದರ್ಶನ ತೋರಿ 205 ರನ್​ ಗಳಿಸಿಯೂ ಸೋಲು ಕಂಡಿತ್ತು.2ನೇ ಪಂದ್ಯದಲ್ಲಿ ಅದ್ಭುತ ಕಮ್​ಬ್ಯಾಕ್ ಮಾಡಿ ಬಲಿಷ್ಠ ಪಂಜಾಬ್ ತಂಡವನ್ನು ಕೇವಲ 128 ರನ್​ಗಳಿಗೆ ನಿಯಂತ್ರಿಸಿ ಜಯ ಸಾಧಿಸಿತ್ತು.
ರಾಜಸ್ಥಾನ್​ ರಾಯಲ್ಸ್​ ಆಡಿರುವ 2 ಪಂದ್ಯಗಳಲ್ಲೂ ಪ್ರಾಬಲ್ಯಯುತ ಜಯ ಸಾಧಿಸಿದೆ.

ರಾಜಸ್ಥಾನ್ ರಾಯಲ್ಸ್ (ಪ್ಲೇಯಿಂಗ್ XI): ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ದೇವದತ್ ಪಡಿಕ್ಕಲ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್ / ನಾಯಕ), ಶಿಮ್ರಾನ್ ಹೆಟ್ಮಾಯರ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ನವದೀಪ್ ಸೈನಿ, ಟ್ರೆಂಟ್ ಬೌಲ್ಟ್, ಪ್ರಸಿಧ್ ಕೃಷ್ಣ, ಯುಜ್ವೇಂದ್ರ ಚಹಾಲ್

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್ XI): ಫಾಫ್ ಡು ಪ್ಲೆಸಿಸ್ (ವಿಕೆಟ್ ಕೀಪರ್), ಅನುಜ್ ರಾವತ್, ವಿರಾಟ್ ಕೊಹ್ಲಿ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಶೆರ್ಫಾನ್ ರುದರ್‌ಫೋರ್ಡ್, ಶಹಬಾಜ್ ಅಹ್ಮದ್, ವನಿಂಡು ಹಸರಂಗ, ಡೇವಿಡ್ ವಿಲ್ಲಿ, ಹರ್ಷಲ್ ಪಟೇಲ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!