ಭೀಕರವಾಗಿ ಬಾಂಗ್ಲಾ ಸಂಸದನನ್ನು ಕೊಂದು ಹಾಕಿದ್ರು, ಮೃತದೇಹಕ್ಕೆ ಚರ್ಮವೇ ಇರಲಿಲ್ಲ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಇತ್ತೀಚೆಗೆ ನಾಪತ್ತೆಯಾಗಿದ್ದ ಬಾಂಗ್ಲಾದೇಶದ ಸಂಸದ ಅನ್ವರುಲ್‌ ಅಜೀಂ ಅನಾರ್‌ ಶವವಾಗಿ ಪತ್ತೆಯಾಗಿದ್ದರು. ಈ ಸಂಬಂಧ ಸಿಐಡಿ ಅಧಿಕಾರಿಗಳು ನಡೆಸಿದ್ದ ತನಿಖೆಯ ವೇಳೆ ಮಹತ್ವದ ಅಂಶವೊಂದು ಬಯಲಾಗಿದೆ.

ಕೋಲ್ಕತ್ತಾದ ನ್ಯೂ ಟೌನ್ ಪ್ರದೇಶದಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಸಂಸದರನ್ನು ಕತ್ತು ಹಿಸುಕಿ, ಚರ್ಮ ಸುಲಿದು ಕತ್ತರಿಸಿ ಹಾಕಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಸಂಬಂಧ ಮುಂಬೈನಲ್ಲಿ ನೆಲೆಸಿರುವ ಬಾಂಗ್ಲಾದೇಶದ ಅಕ್ರಮ ವಲಸಿಗ ಜಿಹಾದ್ ಹವಾಲ್ದಾರ್ ಎಂಬಾತನನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಈತ ಸಂಸದರ ಭೀಕರ ಹತ್ಯೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಸಿಐಡಿ ಮೂಲಗಳ ಪ್ರಕಾರ, ಕೋಲ್ಕತ್ತಾದ ನ್ಯೂಟೌನ್‌ನಲ್ಲಿರುವ ಫ್ಲಾಟ್‌ನಲ್ಲಿ ಕೊಲೆ ಮತ್ತು ಸಂಸದರ ದೇಹವನ್ನು ತುಂಡು ತುಂಡಾಗಿಸಿ ವಿಕೃತಿ ಮೆರೆದಿರುವ ಬಗ್ಗೆ ಜಿಹಾದ್ ಹವಾಲ್ದಾರ್ ಒಪ್ಪಿಕೊಂಡಿದ್ದಾನೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!