Friday, October 7, 2022

Latest Posts

ಕೃಷ್ಣಜನ್ಮಾಷ್ಟಮಿ ದಿನದಂದು ಸೌಹಾರ್ದತೆಯ ಮಾತುಗಳನ್ನಾಡಿದ ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬಾಂಗ್ಲಾದೇಶದಲ್ಲಿರುವ ಹಿಂದು ಸಮುದಾಯಕ್ಕೆ ನನಗೆ ಇರುವ ಹಕ್ಕುಗಳೇ ಇವೆ ಎಂದು ಪ್ರಧಾನಿ ಶೇಖ್ ಹಸೀನಾ ಹೇಳಿದ್ದಾರೆ.

ಪಶ್ಚಿಮ ಬಂಗಾಳಕ್ಕಿಂತಲೂ ಢಾಕಾದಲ್ಲಿ ದುರ್ಗಾ ಪೂಜೆ ಹಬ್ಬದ ಆಚರಣೆಯಲ್ಲಿ ಹೆಚ್ಚಿನ ಮಂಟಪಗಳಿರುತ್ತದೆ ಎಂದು ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಪ್ರತಿಪಾದಿಸಿದ್ದಾರೆ.

ಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಹಿಂದು ಸಮುದಾಯದೊಂದಿಗೆ ಸಂವಹ ನಡೆಸಿರುವ ಹಸೀನಾ, ಸಮುದಾಯದ ಮಂದಿ ಅಲ್ಪಸಂಖ್ಯಾತರೆಂದು ಭಾವಿಸಿಕೊಳ್ಳಬಾರದು. ಇಲ್ಲಿ ಧರ್ಮಗಳನ್ನು ಲೆಕ್ಕಿಸದೇ ಎಲ್ಲರೂ ಸಮಾನ ಹಕ್ಕುಗಳನ್ನು ಹೊಂದಿದ್ದಾರೆ ಎಂದು ಹೇಳಿದ್ದಾರೆ.

ನಾವು ಎಲ್ಲಾ ಧರ್ಮ, ಮತೀಯರೂ ಸಮಾನ ಹಕ್ಕುಗಳನ್ನು ಹೊಂದಿರುವುದನ್ನು ಬಯಸುತ್ತೇವೆ. ನೀವು ಈ ದೇಶದ ಜನರು, ನನಗೆ ಎಷ್ಟು ಹಕ್ಕು ಇದೆಯೋ ಅಷ್ಟೇ ಹಕ್ಕು ಇಲ್ಲಿ ನಿಮಗೂ ಇದೆ ಎಂದು ಹಿಂದೂ ಸಮುದಾಯಕ್ಕೆ ಶೇಖ್ ಹಸೀನಾ ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!