ಬಾಂಗ್ಲಾ ಪ್ರಧಾನಿ ರಾಜೀನಾಮೆಗೆ ಒತ್ತಾಯ: ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಬಾಂಗ್ಲಾದೇಶ ರಾಜಧಾನಿ ಢಾಕಾದಲ್ಲಿ ಬರೋಬ್ಬರಿ 1 ಲಕ್ಷ ಮಂದಿ ಪ್ರತಿಭಟನೆ ನಡೆಸುತ್ತಿದ್ದು, .ಪ್ರಧಾನಿ ಶೇಕ್ ಹಸಿನಾ ತಕ್ಷಣವೇ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುತ್ತಿದೆ.

ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಪ್ರತಿಭಟನಾಕಾರರು ಪೊಲೀಸರ ಜೊತೆ ಯುದ್ಧಕ್ಕೆ ನಿಂತಿದ್ದು, ಪರಿಸ್ಥಿತಿ ವಿಕೋಪ ಹೋಗಲು ಕಾರಣವಾಗಿದೆ.

ಕಳೆದ 15 ವರ್ಷದಿಂದ ಶೇಕ್ ಹಸಿನಾ ಬಾಂಗ್ಲಾದೇಶ ಪ್ರಧಾನಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಆದರೆ ಬಾಂಗ್ಲಾದೇಶದಲ್ಲಿ ಹಣದುಬ್ಬರದಿಂದ ಜನಸಾಮಾನ್ಯರು ಪರಿಸ್ಥಿತಿ ಆತಂಕಕ್ಕೆ ತಳ್ಳಲ್ಪಟ್ಟಿದೆ. ಹಸೀನಾ ಆಡಳಿತದಲ್ಲಿ ಭ್ರಷ್ಟಾಚಾರ, ಮಾನವ ಹಕ್ಕಗಳ ಉಲ್ಲಂಘನೆ ಅತೀಯಾಗಿದೆ ಎಂದು ಆರೋಪಿಸಿ ಜಮಾತ್ ಇ ಇಸ್ಲಾಮಿ ಪಕ್ಷ ಪ್ರತಿಭಟನೆ ನಡೆಸುತ್ತಿದೆ.

ಪ್ರತಿಭಟನಾಕಾರರು ಬಾಂಗ್ಲಾದೇಶ ಪ್ರಧಾನಿ ಕಾರ್ಯಾಲಯಕ್ಕೆ ಮುತ್ತಿಗೆ ಹಾಕುವ ಪ್ರಯತ್ನ ಮಾಡಿದ್ದಾರೆ.ಈ ವೇಳೆ ಮಾತಿನ ಚಕಮಕಿ ನಡೆದು ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದಾರೆ. ಇತ್ತ ಪ್ರತಿಪಕ್ಷ ಪ್ರತಿಭಟನೆ ತೀವ್ರಗೊಳಿಸಿದೆ. ಇದೀಗ ಸರ್ಕಾರಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಮೂರೇ ತಿಂಗಳಿಗೆ ಬಾಂಗ್ಲಾದೇಶದಲ್ಲಿ ಚುನಾವಣೆ ನಡೆಯಲಿದೆ. ಇದಕ್ಕೂ ಮೊದಲು ಪ್ರತಿಪಕ್ಷ ಮತಕ್ರೋಢಿಕರಣಕ್ಕೆ ಮುಂದಾಗಿದೆ. ಇದೇ ವೇಳೆ ನ್ಯಾಯಸಮ್ಮತ ಚುನಾವಣೆಗೆ ಆಗ್ರಹಗಳು ವ್ಯಕ್ತವಾಗಿದೆ.

ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ ಕಾರಣ ಹಲವು ಪೊಲೀಸರು ಗಾಯಗೊಂಡಿದ್ದಾರೆ. 3000ಕ್ಕೂ ಹೆಚ್ಚು ಪ್ರತಿಭಟನಾಕಾರರು ಪೊಲೀಸ್ ಬ್ಯಾರಿಕೇಟ್ ಮುರಿದು ಒಳನುಗ್ಗಿದ್ದಾರೆ. ಈಗಾಗಲೇ 200ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಹಸೀನಾ ತಕ್ಷಣವೇ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ಪ್ರತಿಭಟನೆ ತೀವ್ರಗೊಳಿಸುವುದಾಗಿ ಪ್ರತಪಕ್ಷ ನಾಯಕ ಎಚ್ಚರಿಕೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!