ಹೊಸದಿಗಂತ ಡಿಜಿಟಲ್ ಡೆಸ್ಕ್:
ಶೇಖ್ ಹಸೀನಾ ಅವರ ರಾಜೀನಾಮೆಗೆ ಒತ್ತಾಯಿಸಿದ ಪ್ರತಿಭಟನಾಕಾರರು ಇದೀಗ ಬಾಂಗ್ಲಾದೇಶದ ಮುಖ್ಯ ನ್ಯಾಯಮೂರ್ತಿ ಮತ್ತು ಮೇಲ್ಮನವಿ ವಿಭಾಗದ ನ್ಯಾಯಾಧೀಶರ ರಾಜೀನಾಮೆಗೆ ಒತ್ತಾಯಿಸಿದರು.
ಬಾಂಗ್ಲಾದೇಶದ ನೂರಾರು ಪ್ರತಿಭಟನಾಕಾರರು ಸುಪ್ರೀಂ ಕೋರ್ಟ್‌ಗೆ ಮುತ್ತಿಗೆ ಹಾಕಿದರು. 1 ಗಂಟೆಯ ಒಳಗಡೆ ಮುಖ್ಯ ನ್ಯಾಯಮೂರ್ತಿ ಒಬೈದುಲ್ ಹಸನ್ ರಾಜೀನಾಮೆ ನೀಡುವಂತೆ ಪ್ರತಿಭಟನಾಕಾರರು ಡೆಡ್‌ಲೈನ್ ನೀಡಿದ್ದಾರೆ.
ಆ ಗಡುವಿನೊಳಗೆ ನ್ಯಾಯಾಧೀಶರು ರಾಜೀನಾಮೆ ನೀಡದಿದ್ದರೆ ನ್ಯಾಯಾಧೀಶರ ನಿವಾಸಕ್ಕೆ ಮುತ್ತಿಗೆ ಹಾಕುವುದಾಗಿ ವಿದ್ಯಾರ್ಥಿಗಳು ಬೆದರಿಕೆ ಹಾಕಿದ್ದಾರೆ.