April 28, 2026
Tuesday, April 28, 2026
spot_img

ಬಾಂಗ್ಲಾ ಹಿಂಸಾಚಾರ ಪ್ರಕರಣ: ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಂಗ್ಲಾದೇಶ ರಾಜಕೀಯ ವಲಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ದೇಶದ ಮೊದಲ ಮಹಿಳಾ ಸಂಸತ್ ಸ್ಪೀಕರ್ ಆಗಿ ಇತಿಹಾಸ ನಿರ್ಮಿಸಿದ್ದ ಮಾಜಿ ನಾಯಕಿ ಶಿರಿನ್ ಶರ್ಮಿನ್ ಚೌಧರಿ ಅವರನ್ನು ಢಾಕಾ ಮೆಟ್ರೋಪಾಲಿಟನ್ ಪೊಲೀಸರ ಪತ್ತೇದಾರಿ ವಿಭಾಗ (DB) ಇಂದು ಬಂಧಿಸಿದೆ.

ಅಧಿಕಾರಿಗಳ ಮಾಹಿತಿ ಪ್ರಕಾರ, ಢಾಕಾದ ಧನ್ಮಂಡಿ 8/ಎ ರಸ್ತೆಯಲ್ಲಿರುವ ಅವರ ನಿವಾಸದಿಂದ ಮುಂಜಾನೆ ಅವರನ್ನು ವಶಕ್ಕೆ ಪಡೆಯಲಾಗಿದೆ. ಬಳಿಕ ಅವರನ್ನು ಡಿಬಿ ಕಚೇರಿಗೆ ಕರೆದೊಯ್ಯಲಾಗಿದೆ ಎಂದು ಹೆಚ್ಚುವರಿ ಕಮಿಷನರ್ ಮೊಹಮ್ಮದ್ ಶಫೀಕುಲ್ ಇಸ್ಲಾಂ ಖಚಿತಪಡಿಸಿದ್ದಾರೆ.

ಇದನ್ನೂ ಓದಿ:

ವಿದ್ಯಾರ್ಥಿ ಚಳವಳಿಯ ವೇಳೆ ನಡೆದ ಹಿಂಸಾಚಾರ ಮತ್ತು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಕೇಸ್ ಹಿನ್ನೆಲೆಯಲ್ಲಿ ಈ ಬಂಧನ ನಡೆದಿದೆ ಎಂದು ತಿಳಿದುಬಂದಿದೆ. ವಿಶೇಷವಾಗಿ 2024ರ ಪ್ರತಿಭಟನೆ ಸಂದರ್ಭ ನಡೆದ ಗುಂಡಿನ ದಾಳಿ ಪ್ರಕರಣದಲ್ಲಿ ಅವರ ಹೆಸರು ಸೇರಿಸಲಾಗಿದೆ ಎಂಬ ವರದಿಗಳು ಹೊರಬಿದ್ದಿವೆ.

ಶಿರಿನ್ ಶರ್ಮಿನ್ ಚೌಧರಿ ಅವರು 2013ರಿಂದ 2024ರವರೆಗೆ ನಿರಂತರವಾಗಿ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ್ದರು. ಬಾಂಗ್ಲಾದೇಶದ ಮೊದಲ ಮಹಿಳಾ ಸ್ಪೀಕರ್ ಎಂಬ ಹೆಗ್ಗಳಿಕೆಯನ್ನು ಪಡೆದ ಅವರು, ಶೇಖ್ ಹಸೀನಾ ಸರ್ಕಾರ ಪತನಗೊಂಡ ನಂತರ 2024ರ ಸೆಪ್ಟೆಂಬರ್‌ನಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !