ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಬಾಂಗ್ಲಾದೇಶ ತಂಡ ಗೆಲುವಿನ ಶುಭಾರಂಭ ಮಾಡಿದೆ.
ತನ್ನ ಮೊದಲ ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧ ಆರು ವಿಕೆಟ್ಗಳಿಂದ ಭರ್ಜರಿ ಜಯ ದಾಖಲಿಸಿದೆ. ಅಫ್ಘನ್ನರು ನೀಡಿದ್ದ 157 ರನ್ಗಳ ಗುರಿಯನ್ನು ಬಾಂಗ್ಲಾ 34.4 ಓವರ್ಗಳಲ್ಲಿ ಪೂರೈಸಿ ಗೆಲುವಿನ ನಗೆಬೀರಿದೆ.
ಅಫ್ಘಾನಿಸ್ತಾನ ತಂಡ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿ ಕೇವಲ 156 ರನ್ಗಳಿಗೆ ಆಲೌಟ್ ಆಗಿತ್ತು. ಈ ಸುಲಭ ಗುರಿ ಬೆನ್ನಟ್ಟಿದ ಬಾಂಗ್ಲಾ ಬ್ಯಾಟರ್ಗಳು ನಿರಾಯಾಸವಾಗಿ ಗೆಲುವು ತಂದುಕೊಟ್ಟರು.