ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದ ಢಾಕಾದ ಗುಲಿಸ್ತಾನ್ ಪ್ರದೇಶದಲ್ಲಿ ಬಹುಮಹಡಿ ಕಟ್ಟಡದಲ್ಲಿ ಸ್ಫೋಟ ಸಂಭವಿಸಿದ್ದು, ಕನಿಷ್ಠ 14 ಜನರು ಸಾವನ್ನಪ್ಪಿದ್ದು, ಸುಮಾರು 100 ಜನ ಗಾಯಗೊಂಡಿದ್ದಾರೆ.
ಮಂಗಳವಾರ ಸಂಜೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, 11 ಅಗ್ನಿಶಾಮಕ ಸೇವೆಗಳ ತುರ್ತು ಘಟಕಗಳು ಸ್ಥಳದಲ್ಲಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಜನನಿಬಿಡ ಸಿದ್ದಿಕ್ ಬಜಾರ್‌ನಲ್ಲಿರುವ ಈ ಕಟ್ಟಡವು ಹಲವಾರು ಕಚೇರಿಗಳು ಮತ್ತು ಮಳಿಗೆಗಳನ್ನು ಹೊಂದಿರುವ ವಾಣಿಜ್ಯ ಕಟ್ಟಡವಾಗಿದೆ. ಏಳು ಅಂತಸ್ತಿನ ಕಟ್ಟಡದ ನೆಲ ಮಹಡಿಯಲ್ಲಿ ನೈರ್ಮಲ್ಯ ಸಾಮಗ್ರಿಗಳನ್ನು ಮಾರಾಟ ಮಾಡುವ ಅಂಗಡಿಯಲ್ಲಿ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.