Saturday, December 9, 2023

Latest Posts

ಭಾರತ ಮಹಿಳಾ ಟೀಮ್ ವಿರುದ್ಧ ಗೆದ್ದ ಬಾಂಗ್ಲಾದೇಶ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಬಾಂಗ್ಲಾ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ಮಹಿಳಾ ತಂಡದ ವಿರುದ್ಧ ಬಾಂಗ್ಲಾದೇಶ ಭರ್ಜರಿ ಜಯ ಸಾಧಿಸಿದೆ.

ಟಾಸ್ ಗೆದ್ದ ಭಾರತ ತಂಡದ ನಾಯಕಿ ಹರ್ಮನ್​ಪ್ರೀತ್ ಕೌರ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದರು.
ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ್ ತಂಡ 43 ಓವರ್​ಗಳಲ್ಲಿ 152 ರನ್​ಗಳಿಸಿ ಆಲೌಟ್ ಆಯಿತು.

ಈ ಸುಲಭ ಗುರಿ ಬೆನ್ನತ್ತಿದ ಭಾರತ ತಂಡವು ಉತ್ತಮ ಆರಂಭ ಪಡೆಯಲಿಲ್ಲ. ಆರಂಭಿಕ ಆಟಗಾರ್ತಿಯರಾದ ಪ್ರಿಯಾ ಪುನಿಯಾ (10) ಹಾಗು ಸ್ಮೃತಿ ಮಂಧಾನ (11) ಬೇಗನೆ ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ಹರ್ಮನ್​ಪ್ರೀತ್ ಕೌರ್ (5) ಹಾಗೂ ಯಾಸ್ತಿಕಾ ಭಾಟಿಯಾ ಕೂಡ ಔಟಾದರು.ಕೇವಲ 91 ರನ್​ಗಳಿಗೆ 8 ವಿಕೆಟ್ ಕಳೆದುಕೊಂಡ ಟೀಮ್ ಇಂಡಿಯಾಗೆ ಖಚಿತವಾಗಿತ್ತು.

ಇನ್ನು 9ನೇ ವಿಕೆಟ್ ಆಗಿ ಪೂಜಾ ವಸ್ತ್ರಾಕರ್ (7) ಔಟಾದರೆ, ಬಾರೆಡ್ಡಿ ಅನುಷಾ (2) ರನೌಟ್ ಆದರು. ಇದರೊಂದಿಗೆ ಟೀಮ್ ಇಂಡಿಯಾ 35.5 ಓವರ್​ಗಳಲ್ಲಿ 113 ರನ್​ಗಳಿಗೆ ಸರ್ವಪತನ ಕಂಡಿತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!