ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನ ವಿರುದ್ದದ ಟೆಸ್ಟ್ ಪಂದ್ಯದಲ್ಲಿ ಪ್ರವಾಸಿ ತಂಡ ಬಾಂಗ್ಲಾದೇಶ ಮೇಲುಗೈ ಸಾಧಿಸಿದ್ದು, ಸರಣಿಯನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ಗೆ ಇಳಿದ ಪಾಕಿಸ್ತಾನ ತಮಡವು ಮೊದಲ ಇನ್ನಿಂಗ್ಸ್ನಲ್ಲಿ 274 ಹಾಗೂ ಎರಡನೇ ಇನ್ನಿಂಗ್ಸ್ನಲ್ಲಿ 172 ರನ್ಗಳಿಸಿ ಆಲೌಟ್ ಆಯಿತು. ಇದಕ್ಕುತ್ತರವಾಗಿ ಆಡಿದ ಬಾಂಗ್ಲಾದೇಶ ತಂಡವು ಮೊದಲ ಇನ್ನಿಂಗ್ಸ್ನಲ್ಲಿ 262 ರನ್, ಎರಡನೇ ಇನ್ನಿಂಗ್ಸ್ನಲ್ಲಿ 4 ವಿಕೆಟ್ ನಷ್ಟಕ್ಕೆ 185 ರನ್ ಗಳಿಸಿ ಗೆಲುವಿನ ನಗೆ ಬೀರುವ ಮೂಲಕ ಆತಿಥೇಯರಿಗೆ ಭಾರೀ ಮುಖಭಂಗವನ್ನುಂಟು ಮಾಡಿತು.
ಇದೀಗ ಪಾಕಿಸ್ತಾನದ ನೆಲದಲ್ಲಿ ಟೆಸ್ಟ್ ಸರಣಿ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿರುವ ಬಾಂಗ್ಲಾದೇಶ ಆತಿಥೇಯರ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಆಸೆಯನ್ನು ಕಿತ್ತು ಹೊರಹಾಕಿದೆ.