ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ಬೆಂಗಳೂರಿನ ಬಾಂಗ್ಲಾ ಯುವತಿ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಗದಿತ ಅವಧಿಯಲ್ಲಿ ಚಾರ್ಜ್ಶೀಟ್ ಸಲ್ಲಿಸಿದ ಪೊಲೀಸರಿಗೆ ನಗರ ಪೊಲೀಸ್ ಆಯುಕ್ತ ಬಹುಮಾನ ಘೋಷಿಸಿದ್ದಾರೆ.
ಕೇವಲ ಐದು ವಾರಗಳಲ್ಲಿ ಪ್ರಕರಣದ ಆರೋಪಿಗಳನ್ನು ಪತ್ತೆ ಮಾಡಿ ಚಾರ್ಜ್ಶೀಟ್ ಸಲ್ಲಿಸಿದ ಪೋಲಿಸ್ ತಂಡಕ್ಕೆ 1ಲಕ್ಷ ರೂಗಳ ಬಹುಮಾನವನ್ನು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಘೋಷಿಸಿದ್ದಾರೆ.
ಪೂರ್ವ ವಿಭಾಗ ಡಿಸಿಪಿ ಎಸ್. ಡಿ. ಶರಣಪ್ಪ ನೇತೃತ್ವದಲ್ಲಿ ಕೇವಲ ಐದು ವಾರಗಳಲ್ಲಿ ಪ್ರಕರಣವನ್ನು ಮಿಂಚಿನ ವೇಗದಲ್ಲಿ ಪೊಲೀಸರು ಭೇದಿಸಿದ್ದರು.