September 20, 2026
Sunday, September 20, 2026
spot_img

12 ವರ್ಷ ಅಕ್ರಮ ವಾಸ, ನಕಲಿ ಪಾಸ್‌ಪೋರ್ಟ್ ಹೊಂದಿದ್ದ ಬಾಂಗ್ಲಾ ಪ್ರಜೆಗೆ 3 ವರ್ಷ ಜೈಲು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ನಕಲಿ ದಾಖಲೆಗಳ ನೆರವಿನಿಂದ ದಶಕಕ್ಕೂ ಹೆಚ್ಚು ಕಾಲ ಕಾನೂನುಬಾಹಿರವಾಗಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆಗೆ ಸ್ಥಳೀಯ ನ್ಯಾಯಾಲಯವು 3 ವರ್ಷಗಳ ಜೈಲು ಶಿಕ್ಷೆ ಹಾಗೂ ₹5,000 ದಂಡ ವಿಧಿಸಿದೆ. ಸಿಂಧನೂರಿನ 2ನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ಕೋರ್ಟ್ ಈ ಮಹತ್ವದ ಆದೇಶ ನೀಡಿದೆ. ಆರೋಪಿ ಶೋರನಜಿತ್ ಮಂಡಲ್ ಶಿಕ್ಷೆಯ ಅವಧಿ ಮುಗಿದ ನಂತರ ಆತನನ್ನು ತಾಯ್ನಾಡಿಗೆ ಗಡೀಪಾರು ಮಾಡಲು ಸರ್ಕಾರಕ್ಕೆ ಸೂಚಿಸಲಾಗಿದೆ.

ಬಯಲಾಯ್ತು ನಕಲಿ ಪಾಸ್‌ಪೋರ್ಟ್ ಜಾಲ!

ಆರೋಪಿ ಶೋರನಜಿತ್ ಸಿಂಧನೂರು ತಾಲೂಕಿನ ಆರ್‌ಎಚ್ ಕ್ಯಾಂಪ್‌-3 ರಲ್ಲಿ ಕಳೆದ 12 ವರ್ಷಗಳಿಂದ ವಾಸವಿದ್ದನು. 2018ರಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಭಾರತೀಯ ಪಾಸ್‌ಪೋರ್ಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದನು. ಆದರೆ, ಬಾಂಗ್ಲಾದೇಶದಲ್ಲಿರುವ ತನ್ನ ಹೆತ್ತವರನ್ನು ಭೇಟಿಯಾಗಲು ತಾಯ್ನಾಡಿಗೆ ಮರಳುವಾಗ ವಿಮಾನ ನಿಲ್ದಾಣದ ಇಮಿಗ್ರೇಷನ್ ಅಧಿಕಾರಿಗಳ ತಪಾಸಣೆ ವೇಳೆ ಈತನ ನಕಲಿ ದಾಖಲೆಗಳ ಕೃತ್ಯ ಬೆಳಕಿಗೆ ಬಂದಿದೆ.

ಕಾನೂನು ಕ್ರಮ ಮತ್ತು ಶಿಕ್ಷೆ

ಅಧಿಕಾರಿಗಳು ಆರೋಪಿಯ ಪಾಸ್‌ಪೋರ್ಟ್ ಮುಟ್ಟುಗೋಲು ಹಾಕಿಕೊಂಡಿದ್ದು, 2018 ರಲ್ಲಿ ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯವು ಇದೀಗ ದೋಷಿಗೆ ಕಠಿಣ ಶಿಕ್ಷೆ ಪ್ರಕಟಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !