ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು(ನವೆಂಬರ್ 19) ಬ್ಯಾಂಕಿಂಗ್ ನೌಕರರು ದೇಶಾದ್ಯಂತ ಮುಷ್ಕರ ಕೈಗೊಂಡಿದ್ದು, ಇದು ಎಟಿಎಂಗಳ ಜೊತೆಗೆ ಬ್ಯಾಂಕಿಂಗ್ ಸೇವೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಾಗಿದೆ. ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ (ಎಐಬಿಇಎ) ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ.
ಅಖಿಲ ಭಾರತ ಬ್ಯಾಂಕ್ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಸಿ.ಎಚ್.ವೆಂಕಟಾಚಲಂ ಅವರು ಈ ಮೊದಲೇ ಭಾರತೀಯ ಬ್ಯಾಂಕ್‌ಗಳ ಸಂಘಕ್ಕೆ (ಐಬಿಎ) ನೋಟಿಸ್ ನೀಡಿದ್ದು, ತಮ್ಮ ಸದಸ್ಯರು ಈ ತಿಂಗಳ 19.11.2022 ರಂದು ಮುಷ್ಕರ ನಡೆಸುವುದಾಗಿ ನೋಟಿಸ್‌ನಲ್ಲಿ ಉಲ್ಲೇಖಿಸಿದ್ದರು.
ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ ಕರೆ ನೀಡಿರುವ ಮುಷ್ಕರಕ್ಕೆ ಯುನೈಟೆಡ್ ಫೋರಂ ಕೂಡ ಬೆಂಬಲ ವ್ಯಕ್ತಪಡಿಸಿದೆ. “ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್‌ನಿಂದ, ನಮ್ಮ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರದ ಪ್ರಕಾರ ನಾವು ನೌಕರರ ಮುಷ್ಕರ ಮತ್ತು ಬೇಡಿಕೆಗಳಿಗೆ ನಮ್ಮ ಸಂಪೂರ್ಣ ಬೆಂಬಲವನ್ನು ನೀಡುತ್ತೇವೆ. UFBU ನಿಂದ ನಾವು ದ್ವಿಪಕ್ಷೀಯತೆ ಮತ್ತು ಪರಸ್ಪರ ಚರ್ಚೆಗಳ ಮೂಲಕ ಸಮಸ್ಯೆಗಳ ಪರಿಹಾರಕ್ಕೆ ಬದ್ಧರಾಗಿದ್ದೇವೆ” ಎಂದು ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ಸ್ ಯೂನಿಯನ್ ಹೇಳಿದೆ.