RECRUITMENT | ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿ 500 ಪ್ರೊಬೆಷನರಿ ಅಧಿಕಾರಿ ಹುದ್ದೆಗಳ ನೇಮಕಾತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿ 500 ಪ್ರೊಬೆಷನರಿ ಅಧಿಕಾರಿ (ಪಿಒ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಬಿ.ಇ/ಬಿ.ಟೆಕ್/ಪದವಿ ವಿದ್ಯಾರ್ಹತೆಯುಳ್ಳ ಮತ್ತು ಫೆಬ್ರವರಿ 1,2023ರ ಅನ್ವಯ ಕನಿಷ್ಟ 20 ರಿಂದ ಗರಿಷ್ಟ 29 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಪ್ರೊಬೆಷನರಿ ಅಧಿಕಾರಿ (ಪಿಒ) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 36,000/– ರಿಂದ 63,840/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್‌ಲೈನ್‌ ಪರೀಕ್ಷೆ, ಗುಂಪು ಚರ್ಚೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿದಾರರು 850/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳು 175/-ರೂ
ಅರ್ಜಿಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕಿರುತ್ತದೆ.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಫೆಬ್ರವರಿ 11,2023 ರಿಂದ ಫೆಬ್ರವರಿ 25,2023ರೊಳಗೆ ಅರ್ಜಿಯನ್ನು ಹಾಕಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!