ಈ ವಾರ ಬ್ಯಾಂಕ್ ನೌಕರರ ಮುಷ್ಕರ: ರಾಷ್ಟ್ರವ್ಯಾಪಿ ಪ್ರತಿಭಟನೆಯಿಂದಾಗಿ ಬ್ಯಾಂಕಿಂಗ್ ಸೇವೆಗಳಿಗೆ ಹೊಡೆತ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ನವೆಂಬರ್ 19 ರಂದು ಬ್ಯಾಂಕಿಂಗ್ ನೌಕರರು ದೇಶಾದ್ಯಂತ ಮುಷ್ಕರ ನಡೆಸಲಿದ್ದಾರೆ. ಇದು ಎಟಿಎಂಗಳ ಜೊತೆಗೆ ಬ್ಯಾಂಕಿಂಗ್ ಸೇವೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಹಾಗಾಗಿ ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದಂತೆ ಯಾವುದೇ ವಹಿವಾಟುಗಳ ಬಗ್ಗೆ ಮುಂಜಾಗ್ರತೆ ವಹಿಸುವುದು ಉತ್ತಮ. ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ (ಎಐಬಿಇಎ) ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ. ನವೆಂಬರ್ 19 ಮೂರನೇ ಶನಿವಾರ ಬ್ಯಾಂಕುಗಳು ಸಾಮಾನ್ಯವಾಗಿ ಪ್ರತಿ ತಿಂಗಳ ಮೊದಲ ಮತ್ತು ಮೂರನೇ ಶನಿವಾರ ತೆರೆದಿರುತ್ತವೆ. ಎರಡನೇ ಮತ್ತು ನಾಲ್ಕನೇ ಶನಿವಾರಗಳು ಬ್ಯಾಂಕ್ ರಜೆ.

ಅಖಿಲ ಭಾರತ ಬ್ಯಾಂಕ್ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಸಿ.ಎಚ್.ವೆಂಕಟಾಚಲಂ ಅವರು ಭಾರತೀಯ ಬ್ಯಾಂಕ್‌ಗಳ ಸಂಘಕ್ಕೆ (ಐಬಿಎ) ನೋಟಿಸ್ ನೀಡಿದ್ದಾರೆ. ತಮ್ಮ ಸದಸ್ಯರು ಈ ತಿಂಗಳ 19.11.2022 ರಂದು ಮುಷ್ಕರ ನಡೆಸಲು ಮುಂದಾಗಿದ್ದಾರೆ ಎಂಬುದು ನೋಟಿಸ್‌ನ ಸಾರಾಂಶವಾಗಿದೆ.‌

ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ ಕರೆ ನೀಡಿರುವ ಮುಷ್ಕರಕ್ಕೆ ಯುನೈಟೆಡ್ ಫೋರಂ ಕೂಡ ಬೆಂಬಲ ವ್ಯಕ್ತಪಡಿಸಿದೆ. “ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್‌ನಿಂದ, ನಮ್ಮ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರದ ಪ್ರಕಾರ ನಾವು ನೌಕರರ ಮುಷ್ಕರ ಮತ್ತು ಬೇಡಿಕೆಗಳಿಗೆ ನಮ್ಮ ಸಂಪೂರ್ಣ ಬೆಂಬಲವನ್ನು ನೀಡುತ್ತೇವೆ. UFBU ನಿಂದ ನಾವು ದ್ವಿಪಕ್ಷೀಯತೆ ಮತ್ತು ಪರಸ್ಪರ ಚರ್ಚೆಗಳ ಮೂಲಕ ಸಮಸ್ಯೆಗಳ ಪರಿಹಾರಕ್ಕೆ ಬದ್ಧರಾಗಿದ್ದೇವೆ” ಎಂದು ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ಸ್ ಯೂನಿಯನ್ ಹೇಳಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!