ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಗಳೂರು ಬ್ಯಾಂಕ್ ದರೋಡೆ ಪ್ರಕರಣ ಮತ್ತು ಬೀದರ್ ಎಟಿಎಂ ದರೋಡೆ ಪ್ರಕರಣದ ಆರೋಪಿಗಳ ಬಗ್ಗೆ ಖಚಿತ ಮಾಹಿತಿ ಕಲೆ ಹಾಕಿದ್ದು, ಶೀಘ್ರವೇ ಆರೋಪಿಗಳ ಬಂಧನ ಮಾಡೋದಾಗಿ ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.
ಈಗಾಗಲೇ ಗೃಹ ಇಲಾಖೆಯಿಂದ ಬ್ಯಾಂಕ್ ಮತ್ತು ಎಟಿಎಂಗಳಿಗೆ ಯಾವ ರೀತಿ ಭದ್ರತೆ ಇರಬೇಕು ಅಂತ ರೂಲ್ಸ್ ಕೊಟ್ಡಿದ್ದೇವೆ. ಎಲ್ಲಾ ಎಟಿಎಂ, ಬ್ಯಾಂಕ್ ಗಳಿಗೆ ಸೂಚನೆ ಹೋಗುತ್ತದೆ. ಎಟಿಎಂಗೆ ಹಣ ಹಾಕೋಕೆ ಬ್ಯಾಂಕ್ ನವರು ಕಾಂಟ್ರಾಕ್ಟ್ ಅವರಿಗೆ ಕೊಟ್ಟಿರುತ್ತಾರೆ. ಎಟಿಎಂಗೆ ಹಣ ತುಂಬುವಾಗ ಕಡ್ಡಾಯವಾಗಿ ಆರ್ಮ್ ಕಾರ್ಡ್ ಇರಬೇಕು ಅಂತ ನಿಯಮ ಈಗಾಗಲೇ ಇದೆ. ಬೀದರ್ ಘಟನೆ ಆದಾಗ ಆರ್ಮ್ ಗಾರ್ಡ್ ಇರಲಿಲ್ಲ. ಹೀಗಾಗಿ ಘಟನೆ ಆಗಿದೆ. ಮಂಗಳೂರು ಬ್ಯಾಂಕ್ ದರೋಡೆಯಾದಾಗಲು ಕೂಡಾ ಗಾರ್ಡ್ ಇರಲಿಲ್ಲ ಅಂತ ಮಾಹಿತಿ ಇದೆ. ಹೀಗಾಗಿ ಇಲಾಖೆ ಕೊಟ್ಟ ರೂಲ್ಸ್‌ಗಳು ಲ್ಯಾಪ್ಸ್ ಆಗಬಾರದು. ಇಂತಹ ಅವಕಾಶಗಳಿಗೆ ಅಕ್ರಮ ಮಾಡೋರು ಕಾಯ್ತಾ ಇರುತ್ತಾರೆ. ಹೀಗಾಗಿ ಬ್ಯಾಂಕ್‌ನವರು ನಮ್ಮ ಜೊತೆ ಸಹಕಾರ ಕೊಡಬೇಕು ಎಂದು ತಿಳಿಸಿದ್ದಾರೆ.
ಮಂಗಳೂರು ಮತ್ತು ಬೀದರ್ ಎರಡೂ ಪ್ರಕರಣದಲ್ಲಿ ಆರೋಪಿಗಳ ಬಗ್ಗೆ ಮಾಹಿತಿ ಕಲೆ ಹಾಕಿದ್ದೇವೆ. ಆದಷ್ಟು ಶೀಘ್ರವಾಗಿ ಆರೋಪಿಗಳನ್ನ ಬಂಧನ ಮಾಡ್ತೀವಿ. ಮಂಗಳೂರು ಕೇಸ್‌ನಲ್ಲಿ ಎರಡು ಕಾರು ಬಂದಿರೋ ಮಾಹಿತಿ ಇದೆ. ಎರಡು ಕೇಸ್ ನಲ್ಲಿ ನಿಖರ ಮಾಹಿತಿಗಳನ್ನ ಪೊಲೀಸರು ಕಲೆ ಹಾಕಿದ್ದಾರೆ. ಈಗಾಗಲೇ 4-5 ಟೀಂಗಳನ್ನ ವಿವಿಧ ರಾಜ್ಯಗಳಿಗೆ ಕಳಿಸಲಾಗಿದೆ. ಎರಡು ಪ್ರಕರಣದಲ್ಲಿ ಬೇರೆ ರಾಜ್ಯದವರು ಮಾಡಿದ್ದಾರೆ ಅನ್ನೋ ಮಾಹಿತಿ ಇದೆ. ಯಾರು ಏನು? ಎಲ್ಲಿಯವರು ಅಂತ ತನಿಖೆಯಿಂದ ಗೊತ್ತಾಗಲಿದೆ ಎಂದರು.