ನಿಷೇಧಿತ ಕೋಡೈನ್‌ ಮಾದಕ ದ್ರವ್ಯ ಸಾಗಾಟ: ಥಾಣೆಯಲ್ಲಿ ಇಬ್ಬರ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ನಿಷೇಧಿತ ಕೋಡೈನ್‌ ಮಾದಕ ದ್ರವ್ಯ ಹೊಂದಿರುವ ಕೆಮ್ಮಿನ ಸಿರಪ್‌ಗಳನ್ನು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು 8,640 ಸಿರಪ್ ಬಾಟಲಿಗಳನ್ನು ‌ ಮುಂಬೈ ಎನ್‌ಸಿಬಿ ಘಟಕದ ಪೋಲೀಸರು ವಶಪಡಿಸಿಕೊಂಡಿದ್ದಾರೆ.

ಕಾರಿನಲ್ಲಿ ಮಾದಕ ದ್ರವ್ಯದ ಬಾಟಲಿಗಳನ್ನು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಆಧಾರದ ಮೇಲೆ ಥಾಣೆಯ ಭಿವಂಡಿ ಪಟ್ಟಣದ ಸಮೀಪ ಆಗ್ರಾ-ಮುಂಬೈ ಹೆದ್ದಾರಿಯಲ್ಲಿ ದಾಳಿ ನಡೆಸಿದ ಪೋಲೀಸರು ವಾಹನದಲ್ಲಿ 60 ಬಾಕ್ಸ್‌ಗಳಲ್ಲಿ ಇರಿಸಲಾಗಿದ್ದ ಒಟ್ಟು 864 ಕೆಜಿ ತೂಕದ ಕೊಡೈನ್ ಆಧಾರಿತ ಕೆಮ್ಮಿನ ಸಿರಪ್‌ನ 8,640 ಬಾಟಲಿಗಳನ್ನು ವಶಪಡಿಸಿಕೊಂಡಿದ್ದಾರೆ ಹಾಗೂ ವಾಹನದಲ್ಲಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಇಬ್ಬರು ವ್ಯಕ್ತಿಗಳ ವಿರುದ್ಧ ಎನ್‌ಸಿಬಿ ಪ್ರಕರಣ ದಾಖಲಿಸಿದ್ದು ತನಿಖೆ ನಡೆಸಲಾಗುತ್ತಿದೆ ಎಂದು ಮೂಲಗಳು ವರದಿ ಮಾಡಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!