ಬೆಳ್ತಂಗಡಿಯಲ್ಲಿ ನಿಷೇಧಿತ ಸ್ಯಾಟಲೈಟ್ ಫೋನ್ ಬಳಕೆ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಏನಂದ್ರು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಂಗಳೂರು ಕುಕ್ಕರ್ ಸ್ಪೋಟದ ಬೆನ್ನಿಗೇ ಭಾರೀ ಆತಂಕಕ್ಕೆ ಕಾರಣವಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಕಕ್ಕಿಂಜೆಯಲ್ಲಿ ಸ್ಯಾಟಲೈಟ್ ಫೋನ್ ಬಳಕೆಯಾಗಿದೆ ಎಂಬ ವದಂತಿಗಳಿಗೆ ಪೊಲೀಸ್ ವರಿಷ್ಠಾಧಿಕಾರಿ ರಿಷಿಕೇಶ್ ಭಗವಾನ್ ಸೋನಾವಾನೆ ತೆರೆ ಎಳೆದಿದ್ದಾರೆ.

ಸ್ಯಾಟಲೈಟ್ ಫೋನ್ ರಿಂಗಣಿಸಿರುವ ಕುರಿತು ಧರ್ಮಸ್ಥಳ ಠಾಣೆ ಪೊಲೀಸರು ತನಿಖೆ ನಡೆಸಿದ್ದು, ಯಾವುದೇ ಕರೆಗಳು ಬಂದಿರುವುದು ದೃಢಪಟ್ಟಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಪೋಟಕ್ಕೂ ಮುನ್ನ ಬೆಳ್ತಂಗಡಿಯ ಬೇಂದ್ರಾಳದ ಬಾರೆ ಎಂಬ ಪ್ರದೇಶದಿಂದ ನಿಷೇಧಿತ ಸ್ಯಾಟಲೈಟ್ ಫೋನ್ ಕರೆ ಕುರಿತು ಭಾರೀ ಸುದ್ದಿಗಳು ಕರಾವಳಿಯಲ್ಲಿ ಹರಿದಾಡುತ್ತಿದ್ದು, ಈ ಹಿನ್ನಲೆಯಲ್ಲಿ ಧರ್ಮಸ್ಥಳ ಪೊಲೀಸರು ಘಟನೆ ನಡೆದಿದೆ ಎನ್ನಲಾದ ಸ್ಥಳಕ್ಕೆ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಆದರೆ ಈ ಬಗ್ಗೆ ಯಾವುದೇ ಸುಳಿವುಗಳು ಪೊಲೀಸರಿಗೆ ಸಿಕ್ಕಿಲ್ಲ ಎಂದು ಸೋನಾವಾನೆ ಸ್ಪಷ್ಟಪಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!