March 24, 2026
Tuesday, March 24, 2026
spot_img

ಬಾನು ಮುಷ್ತಾಕ್ ದಸರಾ ಉದ್ಘಾಟನೆ ವಿರೋಧಿಸಿ ಹೈಕೋರ್ಟ್ ಗೆ ಅರ್ಜಿ: ಡಿ.ಕೆ. ಶಿವಕುಮಾರ್ ಹೇಳಿದ್ದನು?

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವುದನ್ನು ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಹೈಕೋರ್ಟ್ ಮೆಟ್ಟಿಲೇರಿರುವ ವಿಚಾರ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದು, ತಾವು ಬದುಕಿದ್ದೇವೆ ಎಂದು ತೋರಿಸಿಕೊಳ್ಳಲು ಕೆಲವರು ಬಾನು ಮುಸ್ತಾಕ್ ಅವರಿಂದ ದಸರಾ ಉದ್ಘಾಟನೆ ವಿರೋಧಿಸಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ ಎಂದು ಹೇಳಿದ್ದಾರೆ.

ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು.ಈ ಬಗ್ಗೆ ಸಿಎಂ ಈಗಾಗಲೇ ಉತ್ತರ ನೀಡಿದ್ದಾರೆ. ಅವರ ಪಕ್ಷ ಅವರನ್ನು (ಪ್ರತಾಪ್ ಸಿಂಹ) ಕಡೆಗಣಿಸಿದೆ. ಪಾಪ ಆತನಿಗೂ ರಾಜಕೀಯ ಮಾಡಬೇಕಿದೆ. ಹೀಗಾಗಿ ತನ್ನ ಅಸ್ತಿತ್ವ ತೋರಿಸಿಕೊಳ್ಳಲು ಹೀಗೆಲ್ಲಾ ಮಾಡುತ್ತಿದ್ದಾರೆ. ಈ ಬಗ್ಗೆ ಕೋರ್ಟ್ ವಿಚಾರಣೆ ಮಾಡಿ, ತೀರ್ಮಾನ ಮಾಡಲಿದೆ ಎಂದರು.

ಇದರ ಹೊರತಾಗಿ ರಾಜಕೀಯ ಮಾಡಲು ಅವರಿಗೆ ಬೇರೆ ವಿಚಾರ ಇಲ್ಲ. ಅವರಿಗೆ ರಾಜ್ಯದ ಬಗ್ಗೆ ಕಾಳಜಿ ಇದ್ದರೆ ದೆಹಲಿಗೆ ಹೋಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಬೆಂಗಳೂರು ಅಭಿವೃದ್ಧಿಗೆ ಅನುದಾನ, ಮೇಕೆದಾಟು, ಮಹದಾಯಿ, ಕೃಷ್ಣಾ ಮೇಲ್ದಂಡೆ ಯೋಜನೆಗಳಿಗೆ ಅನುಮತಿ, ನರೇಗಾ ಅನುದಾನ ಕೊಡಿಸಲಿ. ಅದನ್ನು ಬಿಟ್ಟು ಈ ರೀತಿ ಖಾಲಿ ಮಾತು ಆಡೋದು ಬೇಡ. ಕೇವಲ ಪ್ರಚಾರಕ್ಕೆ ಅವರೆಲ್ಲ ಹೀಗೆ ರಾಜಕೀಯ ಮಾಡುತ್ತಾರೆ ಎಂದು ಹರಿಹಾಯ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !