ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಡಹಬ್ಬ ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರಿಗೆ ಆಹ್ವಾನ ನೀಡಿರುವ ವಿಷಯವು ಈಗ ರಾಜಕೀಯ ವಲಯದಿಂದ ಕಾನೂನು ಹಾದಿಗೆ ತಲುಪಿದೆ. ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಹೈಕೋರ್ಟ್ ಮೆಟ್ಟಿಲೇರಿದ್ದು, ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದಾರೆ.
ದಸರಾ ಉದ್ಘಾಟನೆ ಸಂದರ್ಭದಲ್ಲಿ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡುವುದು, ವೇದಮಂತ್ರ ಹಾಗೂ ಧಾರ್ಮಿಕ ಆಚರಣೆಗಳೊಂದಿಗೆ ಕಾರ್ಯಕ್ರಮ ನಡೆಸುವುದು ಸಂಪ್ರದಾಯವಾಗಿದೆ. ಆದರೆ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸುವ ಸರ್ಕಾರದ ನಿರ್ಧಾರವು ಹಿಂದು ಹಾಗೂ ಕನ್ನಡ ಪ್ರೇಮಿಗಳ ಭಾವನೆಗೆ ಧಕ್ಕೆ ತಂದಿದೆ ಎಂದು ಪ್ರತಾಪ್ ಸಿಂಹ ವಾದಿಸಿದ್ದಾರೆ. ಬಾನು ಮುಷ್ತಾಕ್ ಹಿಂದು ವಿರೋಧಿ ಹಾಗೂ ಕನ್ನಡ ವಿರೋಧಿ ಅಭಿಪ್ರಾಯ ಹೊಂದಿದ್ದಾರೆಂದು ಆರೋಪಿಸಿದ್ದಾರೆ.
ಮೈಸೂರಿನ ರಾಜಮನೆತನದವರೂ ಸಹ ಸರ್ಕಾರದ ನಿರ್ಧಾರವನ್ನು ವಿರೋಧಿಸಿದ್ದು, ಇದು ಏಕಪಕ್ಷೀಯ ನಡೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹೀಗಾಗಿ, ಬಾನು ಮುಷ್ತಾಕ್ ಅವರಿಗೆ ನೀಡಿರುವ ಆಹ್ವಾನವನ್ನು ಹಿಂಪಡೆಯಲು ರಾಜ್ಯ ಸರ್ಕಾರಕ್ಕೆ ಸೂಚಿಸಲು ಹೈಕೋರ್ಟ್‌ಗೆ ಮನವಿ ಸಲ್ಲಿಸಲಾಗಿದೆ.