ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಡಹಬ್ಬ ದಸರಾ ಉದ್ಘಾಟಕರಾಗಿ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಹೈಕೋರ್ಟ್‌ಗೆ ಸಲ್ಲಿಸಿದ್ದ ಮೂರು ಪಿಐಎಲ್ (ಸಾರ್ವಜನಿಕ ಹಿತಾಸಕ್ತಿ ಅರ್ಜಿ) ಅರ್ಜಿಗಳ ವಿಚಾರಣೆ ನಡೆಯಲಿದೆ.
ಸರ್ಕಾರದ ಕ್ರಮ ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್ ಸಿಂಹ, ಗಿರೀಶ್ ಕುಮಾರ್ ಮತ್ತು ಗೌರವ್ ಎಂಬವರಿಂದ ಪಿಐಎಲ್ ಸಲ್ಲಿಕೆಯಾಗಿದ್ದು, ಹೈಕೋರ್ಟ್ ಮುಖ್ಯ ನ್ಯಾ. ವಿಭು ಬಕ್ರು ನೇತೃತ್ವದ ವಿಭಾಗೀಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ.
ದಸರಾ ಉದ್ಘಾಟನೆ ವೇಳೆ ಚಾಮುಂಡೇಶ್ವರಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಬೇಕು, ವೇದ ಮಂತ್ರ, ಧಾರ್ಮಿಕ ಆಚರಣೆಗಳೊಂದಿಗೆ ಉದ್ಘಾಟನೆ ಮಾಡುವ ಸಂಪ್ರದಾಯವಿದೆ.
ರಾಜ್ಯ ಸರ್ಕಾರ ಏಕಪಕ್ಷೀಯವಾಗಿ ಭಾನು ಮುಷ್ತಾಕ್ ಅವರ ಆಯ್ಕೆ ಮಾಡಿದ್ದು ಸರ್ಕಾರದ ನಿರ್ಧಾರದಿಂದ ಹಿಂದೂಗಳ ಭಾವನೆಗೆ ಘಾಸಿ ಉಂಟಾಗಿದೆ. ಹೀಗಾಗಿ ಬಾನು ಮುಷ್ತಾಕ್ ರಿಗೆ ನೀಡಿದ ಆಹ್ವಾನ ಹಿಂಪಡೆಯಲು ನಿರ್ದೇಶನ ನೀಡಬೇಕು ಅನ್ನೋದು ಅರ್ಜಿದಾರರ ಮನವಿ ಆಗಿದೆ.
ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ :ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ
