ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೈಸೂರು ದಸರಾ ಉದ್ಘಾಟನೆಗೆ ಇನ್ನು ವಾರವಷ್ಟೇ ಬಾಕಿ ಉಳಿದಿದ್ದು, ಲೇಖಕಿ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಈಗಾಗಲೇ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಇದರ ಬೆನ್ನಲ್ಲೇ ಹೈಕೋರ್ಟ್‌ನಲ್ಲಿ ಮತ್ತೆರಡು ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಸಲ್ಲಿಕೆಯಾಗಿವೆ.
ನಾಡಹಬ್ಬ ಐತಿಹಾಸಿಕ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್‌ರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿದ್ದು ಅವರು ಕನ್ನಡಾಂಬೆ ಬಗ್ಗೆ ಈ ಹಿಂದೆ ನೀಡಿದ್ದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.
ಹಿಂದೂ ಅಲ್ಲದ ಬಾನು ಮುಷ್ತಾಕ್‌ರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಿರುವ ನಿರ್ಧಾರ ವಾಪಸ್ ಪಡೆಯಲು ಸರಕಾರಕ್ಕೆ ನಿರ್ದೇಶನ ನೀಡಬೇಕು. ಅದೇ ರೀತಿ ದಸರಾ ಉದ್ಘಾಟನೆಯು ಹಿಂದೂ ಧಾರ್ಮಿಕ ಸಂಪ್ರದಾಯದ ಅವಿಭಾಜ್ಯ ಭಾಗವೆಂದು ಘೋಷಿಸಿ ಅದನ್ನು ಹಿಂದೂ ಗಣ್ಯರಿಂದ ಉದ್ಘಾಟಿಸಬೇಕು ಎಂದು ಹೇಳಲಾಗಿದೆ.