ಹೊಸದಿಗಂತ ಡಿಜಿಟಲ್ ಡೆಸ್ಕ್:
ದಸರಾ ಉದ್ಘಾಟಕರಾಗಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ಸರ್ಕಾರದ ನಿರ್ಧಾರವನ್ನು ಸ್ವಾಗತ ಮಾಡುತ್ತೇನೆ ಎಂದು ಸಂಸದ ಯದುವೀರ್ ಒಡೆಯರ್ ತಿಳಿಸಿದ್ದಾರೆ.
ಬಾನು ಮುಷ್ತಾಕ್ ಅವರು ಖ್ಯಾತ ಬರಹಗಾರ್ತಿ, ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಹಿತ್ಯ ಪ್ರಶಸ್ತಿ ಸ್ವೀಕರಿಸಿದ್ದಾರೆ. ಜೊತೆಗೆ ಸಾಮಾಜಿಕ ಹೋರಾಟದಲ್ಲಿ ಗುರುತಿಸಿಕೊಂಡಿದ್ದಾರೆ. ಮುಸ್ಲಿಂ ಮಹಿಳೆಯರಿಗೆ ಸಮಾನವಾದ ಹಕ್ಕು ಕೋಡಬೇಕು. ಮಸೀದಿಗಳಿಗೆ ಅವಕಾಶ ಕೋಡಬೇಕು ಎಂದು ಬಾನು ಮುಷ್ತಾಕ್ ಅವರು ಈ ಹಿಂದೆ ಸಾಮಾಜಿಕ ಬಹಿಷ್ಕಾರವನ್ನು ಕೂಡ ಎದುರಿಸಿದ್ದರು ಎಂದಿದ್ದಾರೆ. ಕನ್ನಡ ಭಾಷೆ, ಕನ್ನಡ ಸಾಹಿತ್ಯಕ್ಕಾಗಿ ಅವರು ಕೊಟ್ಟಿರುವ ಕೊಡುಗೆಗಳು ಅಪಾರವಾಗಿದೆ. ಅವರನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿರುವುದನ್ನು ಸ್ವಾಗತ ಮಾಡುತ್ತೇನೆ ಎಂದು ಹೇಳಿದ್ದಾರೆ.