ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೆಲ್ವಿಲ್ಲೆಯಲ್ಲಿರುವ ಬಿಎಪಿಎಸ್ ಸ್ವಾಮಿನಾರಾಯಣ ದೇವಸ್ಥಾನವನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ.
ಈ ವಿಷಯಕ್ಕೆ ಸಂಬಂಧಿಸಿದಂತೆ ನ್ಯೂಯಾರ್ಕ್‌ನಲ್ಲಿರುವ ಭಾರತದ ಕಾನ್ಸುಲೇಟ್ ಜನರಲ್ ಅಮೆರಿಕಾದ ಕಾನೂನು ಅಧಿಕಾರಗಳ ಮುಂದೆ ವಿಷಯವನ್ನು ಪ್ರಸ್ತಾಪಿಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದೆ.
ಮೆಲ್ವಿಲ್ಲೆಯಲ್ಲಿರುವ ಬಿಎಪಿಎಸ್ ಸ್ವಾಮಿನಾರಾಯಣ ದೇವಸ್ಥಾನ ಧ್ವಂಸಗೊಳಿಸಿರುವ ಸಂಬಂಧ ನ್ಯೂಯಾರ್ಕ್‌ನಲ್ಲಿರುವ ಭಾರತದ ಕಾನ್ಸುಲೇಟ್ ಜನರಲ್ ಖಂಡಿಸಿದ್ದು, ಇದು ಸ್ವೀಕಾರವಲ್ಲ ಹಾಗೂ ಅಮೆರಿಕಾದ ಕಾನೂನು ಅಧಿಕಾರಿಗಳು ಹೇಯ ಕೃತ್ಯ ಎಸಗಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪೋಸ್ಟ್ ಹಂಚಿಕೊಂಡಿದ್ದಾರೆ.