ಹೊಸದಿಗಂತ ವರದಿ, ಕಾರವಾರ
ರಾಷ್ಟ್ರಪಿತ ,ಮಹಾತ್ಮ ಗಾಂಧೀಜಿಯವರ 155 ನೇ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಆಯೋಜಿಸಿದ್ದ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢಶಾಲೆ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದ, ಮುಂಡಗೋಡ ತಾಲೂಕು ಹುನಗುಂದದ ಸರ್ಕಾರಿ ಪ್ರೌಢಶಾಲೆಯ ಸಮರ್ಥ ನಾಗರಾಜ ಅರ್ಕಸಾಲಿ, ಅವರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬಹುಮಾನ ವಿತರಿಸಿದರು.
ಬೆಂಗಳೂರಿನ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕೇಂದ್ರ ಕಚೇರಿಯ ಸುಲೋಚನ ಸಭಾಂಗಣದಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ರೂ.,21,000 ರೂ ರೂ.ನಗದು ಪುರಸ್ಕಾರ ಹಾಗೂ ಪ್ರಮಾಣಪತ್ರವನ್ನು ಮುಖ್ಯಮಂತ್ರಿಗಳು ವಿತರಿಸಿದರು.