ರಾಜ್ಯದಲ್ಲಿ ಇನ್ನೆರಡು ದಿನ ಮದ್ಯ ಸಿಗೋದಿಲ್ಲ: ಎಲ್ಲಾ ಬಾರ್‌ ಗಳು ಬಂದ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಇಂದು ರಾತ್ರಿಯಿಂದ ಸೋಮವಾರದವರೆಗೆ ರಾಜ್ಯಾದ್ಯಂತ ಮದ್ಯ ಮಾರಾಟ ಸಂಪೂರ್ಣ ನಿಷೇಧಿಸಲಾಗಿದೆ ಎಂದು ಅಬಕಾರಿ ಸಚಿವ ಕೆ. ಗೋಪಾಲಯ್ಯ ತಿಳಿಸಿದ್ದಾರೆ.
ರಾಜ್ಯದಲ್ಲಿ ಕೋವಿಡ್‌ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ವೀಕೆಂಡ್‌ ಕರ್ಫ್ಯೂ ಜಾರಿಗೊಳಿಸಿದೆ. ಈ ವೇಳೆ ಜನರ ಹಿತದೃಷ್ಟಿಯಿಂದ ಸರ್ಕಾರ ಈ ಕ್ರಮ ಕೈಗೊಳ್ಳಲಾಗಿದೆ.
ರಾಜ್ಯದ ಜನರ ಆರೋಗ್ಯ ಕಾಪಾಡುವುದು ಸರ್ಕಾರದ ಕರ್ತವ್ಯ. ಹಾಗಾಗಿ ಇಂದು ರಾತ್ರಿ 8ರಿಂದ ಸೋಮವಾರ ಬೆಳಗ್ಗೆ 5ಗಂಟೆವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ. ಎಲ್ಲಾ ಬಾರ್‌ ಮತ್ತು ರೆಸ್ಟೋರೆಂಟ್‌ ನ ಮಾಲಿಕರು ಈ ನಿಯಮವನ್ನು ಪಾಲಿಸುವಂತೆ ಮನವಿ ಮಾಡಿದ್ದಾರೆ..

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!