ಬಾರಾಮುಲ್ಲಾದಲ್ಲಿ ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ; ಎಲ್‌ಇಟಿ ಟಾಪ್ ಕಮಾಂಡರ್ ಹತ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಗುರುವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಉನ್ನತ ಕಮಾಂಡರ್ ಹತ್ಯೆಯಾಗಿದ್ದಾನೆ.
ಹಲವಾರು ನಾಗರಿಕರು ಮತ್ತು ಭದ್ರತಾ ಸಿಬ್ಬಂದಿಯ ಹತ್ಯೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಉಗ್ರ ಎಲ್‌ಇಟಿ ಕಮಾಂಡರ್ ಯೂಸುಫ್ ಕಾಂಟ್ರೋನನ್ನು ಹೊಡೆದುರುಳಿಸಲಾಗಿದೆ. ಈ ಮೂಲಕ ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ʼದೊಡ್ಡ ಯಶಸ್ಸುʼ ಸಿಕ್ಕಿದೆ ಎಂದು ಕಾಶ್ಮೀರ ಪೊಲೀಸ್ ಮಹಾನಿರೀಕ್ಷಕ ವಿಜಯ್ ಕುಮಾರ್ ತಿಳಿಸಿದ್ದಾರೆ.
ಕಾಂಟ್ರೋನ ಉಪಟಳಗಳು ಕಾಶ್ಮೀರ ಕಣಿವೆಯಲ್ಲಿ ಇತ್ತೀಚೆಗೆ ಮಿತಿಮೀರುತ್ತಿತ್ತು. ಬಡ್ಗಾಮ್ ಜಿಲ್ಲೆಯ ವಿಶೇಷ ಪೊಲೀಸ್ ಅಧಿಕಾರಿ ಮತ್ತು ಅವರ ಸಹೋದರ, ಒಬ್ಬ ಸೈನಿಕ ಮತ್ತು ನಾಗರಿಕರೊಬ್ಬರ ಹತ್ಯೆ ಸೇರಿದಂತೆ ಇತ್ತೀಚಿನ ಹಲವಾರು ಹತ್ಯೆ ಪ್ರಕರಣಗಳಲ್ಲಿ ಯೂಸೂಫ್‌ ಕಾಂಟ್ರೋ ಭಾಗಿಯಾಗಿದ್ದ. ಭದ್ರತಾ ಪಡೆಗಳು ಆತನನ್ನು ಟಾರ್ಗೆಟ್‌ ಮಾಡಿ ಕಾರ್ಯಾರಣೆ ನಡೆಸಿವೆ.

ಮೌಲ್ವಾ ಪ್ರದೇಶದಲ್ಲಿ ಉಗ್ರರು ಅಡಗಿರುವ ಮಾಹಿತಿ ಪಡೆದ ಭದ್ರತಾ ಪಡೆಗಳು ಶರಣಾಗತಿಗೆ ಸೂಚಿಸಿವೆ. ಇದನ್ನು ನಿರಾಕರಿಸಿದ ಭಯೋತ್ಪಾದಕರು ಭದ್ರತಾ ಪಡೆಗಳ ಮೇಲೆಯೇ ಗುಂಡು ಹಾರಿಸಿದ್ದಾರೆ. ಇದರಿಂದ ನಾಲ್ವರು ಸೈನಿಕರು ಹಾಗೂ ಒಬ್ಬ ನಾಗರಿಕಗೆ ಗಾಯಗಳಾಗಿವೆ ಎಂದು ವರದಿಗಳು ತಿಳಿಸಿವೆ. ಪ್ರತಿದಾಳಿ ನಡೆಸಿದ ಯೋಧರು ಯೂಸೂಫ್‌ ಕಾಂಟ್ರೋನನ್ನು ಹೊಡೆದುರುಳಿಸಿವೆ. ಉಳಿದ ಉಗ್ರರನ್ನು ಸದೆಬಡಿಯುವ ಕಾರ್ಯಾಚರಣೆ ಮುಂದುವರೆದಿದೆ ಎಂದು ಜಮ್ಮುಕಾಶ್ಮೀರ ಡಿಜಿಪಿ ದಿಲ್ಬಾಗ್ ಸಿಂಗ್ ತಿಳಿಸಿದ್ದಾರೆ.
ಸ್ಥಳದಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳು ಸೇರಿದಂತೆ ಅಪಾರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!