ಕಿಲೋ ಮೀಟರ್‌ಗಟ್ಟಲೇ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್

ಬೆಂಗಳೂರಿನ ಲಕ್ಕಸಂದ್ರದಲ್ಲಿ ಕಿಲೋಮೀಟರ್‌ಗಟ್ಟಲೇ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯನ್ನು ಹತ್ಯೆ ಮಾಡಿದ ಘಟನೆ ನಡೆದಿದೆ.

ರಾಜ್ಯದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಮನೆ ಹತ್ತಿರ ವ್ಯಕ್ತಿಯ ಹತ್ಯೆ ಘಟನೆ ನಡೆದಿದೆ. ಹತ್ಯೆಯಾದ ರೌಡಿಶೀಟರ್‌ನನ್ನು (Rowdy Sheeter) ಜೈಪ್ರಕಾಶ್ ಅಲಿಯಾಸ್ ಅಪ್ಪಿ ಎಂದು ಗುರುತಿಸಲಾಗಿದೆ.

ಆತನನ್ನು ಹಂತಕರು ಸುಮಾರು ಕಿಲೋಮೀಟರ್ ದೂರದಿಂದಲೇ ಅಟ್ಟಿಸಿಕೊಂಡು ಬಂದಿದ್ದಾರೆ. ಈ ವೇಳೆ ಲಕ್ಕಸಂದ್ರದ ಹೋಟೆಲೊಂದರ ಒಳಗೆ ಆತ ನುಗ್ಗಿದ್ದು, ಅಲ್ಲಿಯೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದಾರೆ. ಬಳಿಕ ದುಷ್ಕರ್ಮಿಗಳು ಅಲ್ಲಿಂದ ಪರಾರಿಯಾಗಿದ್ದಾರೆ.

ಹತ್ಯೆಯಾದ ಜೈಪ್ರಕಾಶ್ ಲಕ್ಕಸಂದ್ರ ಬಸ್ ನಿಲ್ದಾಣದ ಬಳಿ ಆಂಜನೇಯ ದೇವಸ್ಥಾನದಲ್ಲಿ ಹನುಮ ಜಯಂತಿಯ ಅನ್ನದಾನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ. ಈ ವೇಳೆ ನಾಲ್ಕೈದು ಜನ ಆತನನ್ನು ಗಮನಿಸಿದ್ದು, ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ.

ಕೊಲೆಯಾದ ಜಾಗದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಸ್ಥಳೀಯ ಪೊಲೀಸರ ಜೊತೆ ಹೆಚ್ಚುವರಿಯಾಗಿ ಕೆಎಸ್‍ಆರ್‌ಪಿ ತುಕಡಿ ನಿಯೋಜನೆ ಮಾಡಲಾಗಿದೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!